7:23 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಜನತಾದರ್ಶನ

21/01/2025, 02:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಶಾಸಕ ದರ್ಶನ್ ದ್ರುವನಾರಾಯಣ್ ಅವರಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿರುವ ಶಾಸಕರ ಕಚೇರಿಯಲ್ಲಿ ಇಂದು ಜನತಾದರ್ಶನ ಕಾರ್ಯಕ್ರಮ ನಡೆಯಿತು.
ಪ್ರತಿ ಸೋಮವಾರ ನಂಜನಗೂಡು ಹಾಗೂ ಹುಲ್ಲಹಳ್ಳಿಯಲ್ಲಿ ನಡೆಸಿಕೊಂಡು ಬರುತ್ತಿರುವ ಜನಸಂಪರ್ಕ ಸಭೆ ಇದಾಗಿದೆ.
ಸಭೆಯಲ್ಲಿ ನಂಜನಗೂಡು ಪಟ್ಟಣವು ಸೇರಿದಂತೆ ನಂಜನಗೂಡು ಸುತ್ತಮುತ್ತಲಿನ ಹಾಗೂ ಹುಲ್ಲಹಳ್ಳಿಯಲ್ಲಿ ಹುಲ್ಲಹಳ್ಳಿ ಪಟ್ಟಣವು ಸೇರಿದಂತೆ ಸುತ್ತಮುತ್ತಲಿನ ನಾಗರಿಕರು ಬಂದು ಶಾಸಕರನ್ನ ಭೇಟಿ ಮಾಡಿ ತಮ್ಮ ಸಮಸ್ಯೆ ಹಾಗೂ ಕುಂದುಕೊರತೆಗಳ ಅಹವಾಲನ್ನು ತಿಳಿಸುವ ಕಾರ್ಯಕ್ರಮ ಇದಾಗಿರುತ್ತದೆ.
ಸಾರ್ವಜನಿಕರು ನೇರವಾಗಿ ಬಂದು ಶಾಸಕರಲ್ಲಿ ತಮ್ಮ ಕುಂದು ಕೊರತೆ ಹಾಗೂ ಸಮಸ್ಯೆಗಳನ್ನು ತಿಳಿಸಿ ಮನವಿ ನೀಡುತ್ತಾರೆ. ಸಾರ್ವಜನಿಕರ ಮನವಿಗೆ ಸ್ಪಂದಿಸುವ ಶಾಸಕರು ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರೆ ಮತ್ತೆ ಕೆಲವು ಕುಂದು ಕೊರತೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಫೋನ್ ಮುಖಾಂತರ ತಿಳಿಸಿ ಬಗೆಹರಿಸಲು ಮುಂದಾಗುತ್ತಾರೆ.
ಮಹಿಳೆಯರು, ವೃದ್ಧರು, ವಿಕಲಚೇತನರು ಸೇರಿದಂತೆ ಪಕ್ಷದ ಕಾರ್ಯಕರ್ತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಾಲಿನಲ್ಲಿ ನಿಂತು ಶಾಸಕರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸುತ್ತಾರೆ.
ಸಾಲಿನಲ್ಲಿ ಬರುವ ಮಹಿಳೆಯರು, ವಿಕಲಚೇತನರು ಹಾಗು ಹಿರಿಯ ನಾಗರಿಕರಿಗೆ ಮೊದಲು ಶಾಸಕರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸಿ ನಂತರ ಪಕ್ಷದ ಕಾರ್ಯಕರ್ತ ಮುಖಂಡರಿಗೆ ನೀಡುತ್ತಿರುವುದು ವಿಶೇಷವಾಗಿದೆ.


ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ನಾನು ಶಾಸಕನಾಗಿ ಆಯ್ಕೆ ಆದಾಗಿನಿಂದ ಪ್ರತಿ ಸೋಮವಾರ ನಂಜನಗೂಡು ಮತ್ತು ಹುಲ್ಲಳ್ಳಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದೇನೆ. ಸಾರ್ವಜನಿಕರ ಕುಂದು ಕೊರತೆ ಹಾಗೂ ಸಮಸ್ಯೆಗಳನ್ನು ಖುದ್ದಾಗಿ ತಿಳಿದು ಅಧಿಕಾರಿಗಳ ನೆರವಿನೊಂದಿಗೆ ಅವರ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುತ್ತದೆ ಎಂದು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್ ತಾಲೂಕು ಕಚೇರಿ ಶಿರಸ್ತೆದಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು