10:46 PM Tuesday21 - January 2025
ಬ್ರೇಕಿಂಗ್ ನ್ಯೂಸ್
ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ… ಗಾಂಧಿ ಭಾರತ ಮರು ನಿರ್ಮಾಣ ಕನ್ನಡ- ಆಂಗ್ಲ ಪುಸ್ತಕ ಬಿಡುಗಡೆ: ಬೃಹತ್ ಗಾಂಧಿ… ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ… ನಂಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ: ಡಿಸಿಎಂ ಡಿ.ಕೆ.… ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್…

ಇತ್ತೀಚಿನ ಸುದ್ದಿ

ಉಚ್ಚಿಲದಲ್ಲಿ ನಿರಂತರ ರಸ್ತೆ ಅಪಘಾತ: ಅವೈಜ್ಞಾನಿಕ ಕಾಮಗಾರಿ ಎಂದು ಆರೋಪಿಸಿ ಹೆದ್ದಾರಿ ತಡೆದು ಪ್ರತಿಭಟನೆ

21/01/2025, 21:34

ಉಡುಪಿ(reporterkarnataka.com): ಉಚ್ಚಿಲ ಪೇಟೆಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿರುವುದಕ್ಕೆ ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಆರೋಪಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಚ್ಚಿಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ತಡೆದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಉಚ್ಚಿಲ ಪೇಟೆಯಲ್ಲಿ ಪ್ರತಿಭಟನಾ ಸಭೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ವಿನಯಕುಮಾರ್ ಸೊರಕೆ, ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಾಜ್ ಉಚ್ಚಿಲ ಸಹಿತ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟುಹಿಡಿದರು. ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ನಿಲ್ಲಿಸಿ ಮನವಿ ಸಲ್ಲಿಸಲಾಯಿತು.
ಸ್ಥಳಕ್ಕೆ ಬಂದ ಹೆದ್ದಾರಿ ಪ್ರಾಧಿಕಾರದ ಪ್ರಾದಿಕಾರದ ಯೋಜನಾಧಿಕಾರಿ ಜಾವೇದ್ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು ಕೂಡಲೇ ಸಮಸ್ಯೆಗೆ ಪರಿಹರಿಸದಿದ್ದಲ್ಲಿ ಮುಂದೆ ಇನ್ನಷ್ಟು ಉಗ್ರರೀತಿಯ ಪ್ರತಿಭಟನೆ ಎದುರಿಸಬೆಕಾದೀತು ಎಂದು ಎಚ್ಚರಿಸಿದರು.
ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಪ್ರತಿಭಟನಾಕಾರ ರನ್ನು ಸಮಾಧಾನಪಡಿಸಿ ಶೀಘ್ರದಲ್ಲೇ ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹೆದ್ದಾರಿ ಸುರಕ್ಷತಾ ಸಭೆಯನ್ನು ಕರೆದು ಇಲ್ಲಿನ ಸಮಸ್ಯೆಗಳ ಪರಿಹರಿಸ ಲಾಗುವುದು ಎಂದು ಹೇಳಿದರು.
ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್ ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ ಹೆದ್ದಾರಿ ದೀಪ ಅಳವಡಿಕೆ, ಉಚ್ಚಿಲ ಪೇಟೆಯಲ್ಲಿ ಹೈಮಾಸ್ಕ್ ದೀಪ ಅಳವಡಿಕೆ, ಹೆದ್ದಾರಿಯಲ್ಲಿ ಝೀಬ್ರಾ ಕ್ರಾಸಿಂಗ್, ಸಮರ್ಪಕ ಕ್ರಾಸಿಂಗ್ ವ್ಯವಸ್ಥೆ, ಸರ್ವಿಸ್ ರಸ್ತೆ ಡಿವೈಡರಿಗೆ ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂಬ ಬೇಡಿಕೆ ಇದೆ.
ಪ್ರತಿಭಟನಾ ಸಂದರ್ಭ ಉಚ್ಚಿಲ ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದರು. ಪ್ರತಿಭಟನಾ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿಕ ಹೋರಾಗಾರ ಶೇಖರ್ ಹೆಜಮಾಡಿ, ಎಂ.ಎ ಗಫುರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು