2:52 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ

21/01/2025, 22:38

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಗ ಮತ್ತು ನಗದು ದರೋಡೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವೈಯಲ್ಲಿ ಈ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುರುಗನ್, ರಾಜೇಂದ್ರನ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಮಾಹಿತಿ ಲಭ್ಯವಾಗಿಲ್ಲ.
ಮುಂಬೈಯ ಧಾರಾವಿಯಲ್ಲಿ 10 ಮಂದಿಯ ಖತರ್ನಾಕ್ ಗ್ಯಾಂಗ್ ಬ್ಯಾಂಕ್ ದರೋಡೆಗೆ ಪ್ಲಾನ್ ಹಾಕಿತ್ತು. ಈ ಗ್ಯಾಂಗ್ ನಿಂದ ಇಬ್ಬರನ್ನು ಹೊರಗಿಡಲಾಗಿತ್ತು. ಈ ಹೊರಗಿಟ್ಟ ಇಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯಂತೆ ಮುಂಬೈ ಪೊಲೀಸರು ಅವರ ಮನೆಯ ಮೇಲೆ ನಿಗಾ ಇಟ್ಟಿದ್ದರು. ಈ ನಡುವೆ ದರೋಡೆಕೋರರಲ್ಲಿ ಒಬ್ಬನಾದ ಮುರುಗನ್ ಮಂಗಳೂರಿನ ಕೋಟೆಕಾರಿಗೆ ಬಂದು ಕೋಟೆಕಾರು ಸಹಕಾರಿ ಸಂಘದಿಂದ ನಗ ಮತ್ತು ನಗದು ದೋಚುವ ಪ್ಲಾನ್ ಹಾಕಿದ್ದ. ಈ ಪ್ಲಾನ್ ನಂತೆ ದರೋಡೆ ನಡೆದಿದೆ. ಈ ಬಗ್ಗೆ ಮಂಗಳೂರು ಪೊಲೀಸರಿಗೆ ಮುಂಬೈ ಪೊಲೀಸರು ಮಾಹಿತಿ ನೀಡಿದ್ದರು. ಮುಂಬೈ ಪೊಲೀಸರು ನೀಡಿದ ಸುಳಿವಿನ ಆಧಾರದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದರೋಡೆಕೋರರು ಸಹಕಾರಿ ಸಂಘ ಲೂಟಿ ಮಾಡಿದ ಬಳಿಕ ಕೇರಳ ಮಾರ್ಗವಾಗಿ ಫಿಯೆಟ್ ಕಾರಿನಲ್ಲಿ ಹಣ ಮತ್ತು ಚಿನ್ನದ ಗೋಣಿಯನ್ನು ಒಯ್ದಿದ್ದರು. ಫಿಯೆಟ್ ಕಾರಿನಲ್ಲೇ ಸುಮಾರು 700 ಕಿಮೀ. ಪ್ರಯಾಣ ನಡೆಸಿದ್ಸರು ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು