12:31 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು, ಆಸ್ಪತ್ರೆಗೆ ದಾಖಲು

21/01/2025, 23:46

ಮಂಗಳೂರು(reporterkarnataka.com): ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ.

ತಮಿಳುನಾಡಿನ ತಿರುವೈಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರು ಪೊಲೀಸರು ಸ್ಥಳ ಮಹಜರಿಗೆ ಕರೆದು ತಂದಿದ್ದರು.
ಆರೋಪಿಗಳನ್ನು ಉಳ್ಳಾಲಕ್ಕೆ ಕರೆದೊಯ್ಯುತ್ತಿದ್ದ ವೇಳೆ ಕೆ.ಸಿ. ರೋಡ್ ಬಳಿ ಕಣ್ಣನ್ ಮಣಿ (35) ಎಂಬಾತನ ಪರಾರಿಯಾಗಲು ಯತ್ನಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಪೊಲೀಸರು ಗಾಯಗೊಂಡಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿ.
ಸದ್ಯ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದಾನೆ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆ.ಸಿ. ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಅಲ್ಲಿ ಜೀಪಿನಿಂದ ಇಳಿಯುತ್ತಲೇ ಪೊಲೀಸರಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯ ಚೂರಿನಿಂದ ಹಲ್ಲೆಗೆ ಯತ್ನಿಸಿದ್ದು ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿ ಕಾಲಿಗೆ ಗುಂಡೇಟು ಹೊಡೆದಿದ್ದಾರೆ.
ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಪೇದೆಗಳಾದ ಆಂಜಿನಪ್ಪ, ನಿತಿನ್ ಎಂಬವರಿಗೆ ಗಾಯಗಳಾಗಿವೆ. ಗಾಯಗೊಂಡ ಪೊಲೀಸರು ಮತ್ತು ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡೇಟು ಪ್ರಕರಣದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು