5:11 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ: ಫೈನಾನ್ಸ್ ಸಿಬ್ಬಂದಿಗಳ ಬೆವರಳಿಸಿದ ಹುಲ್ಲಹಳ್ಳಿ ಪೊಲೀಸರು

22/01/2025, 22:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ ಆಗಿದೆ.
ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಇಪ್ಪತ್ತಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜತೆ ವೃತ್ತ ನಿರೀಕ್ಷಕ ಚಂದ್ರಶೇಖರ್ ಮತ್ತು ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಅವರು ಸಭೆ ನಡೆಸಿದ್ದಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಹಳ್ಳಿಗಳ ನೂರಾರು ಕುಟುಂಬಗಳಿಗೆ ನೀಡಿರುವ ಸಾಲದ ವಿವರವನ್ನು ಕೇಳಿ ಮಾಹಿತಿಯನ್ನು ಪೊಲೀಸರು ಪಡೆದರು.
*ಕೂಲಿ ಕಾರ್ಮಿಕರಿಗೆ ಸಾಲ ನೀಡುವ ಮುನ್ನ ನೀವು ಸಾಲ ವಸೂಲಾತಿಯಲ್ಲೂ ತಮ್ಮ ಜವಾಬ್ದಾರಿ ಹಾಗೂ ಕಠಿಣ ಕ್ರಮದ ಬಗ್ಗೆ ಮಾಹಿತಿಯನ್ನು ಏಕೆ ತಿಳಿಸಿಲ್ಲ ಎಂದು ಫೈನಾನ್ಸ್ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.

*ಸಾಲ ನೀಡಿದ ಮೇಲೆ ಕಿರುಕುಳದ ಅವಶ್ಯಕತೆ ಏಕೆ ?

*ಸಾಲ ನೀಡಿದ್ದೇವೆ ಎಂದು ಒಬ್ಬಂಟಿ ಮಹಿಳೆಯರ ಮನೆಗೆ ಹೋಗಿ ದಮ್ಕಿ ಹಾಕುವುದು ಎಷ್ಟರ ಮಟ್ಟಿಗೆ ಸರಿ ?

*ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಾದ ನೀವು ಕೂಲಿ ಕಾರ್ಮಿಕರು ಬಡ ರೈತರಿಂದ ಸಾಲ ನೀಡಿ ಎಷ್ಟು ಪರ್ಸೆಂಟ್ ಬಡ್ಡಿಯನ್ನು ತೆಗೆದುಕೊಳ್ಳುತ್ತಿದ್ದೀರಿ?

*ನೀವು ತೆಗೆದುಕೊಳ್ಳುವ ಬಡ್ಡಿಯ ಮಾಹಿತಿಯನ್ನು ಆರ್ ಬಿಐ ಅಥವಾ ತಾಲೂಕು ದಂಡಾಧಿಕಾರಿಗಳು ಇಲ್ಲಾ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೀರಾ ?

*ನಿಮ್ಮ ಕಿರುಕುಳ ತಾಳಲಾರದೆ ನೀವು ಸಾಲ ನೀಡಿದ ಎಷ್ಟು ಕುಟುಂಬಗಳು ಬೀದಿಗೆ ಬಿದ್ದಿವೆ ಮನೆಯನ್ನು ತೊರೆದು ನಾಪತ್ತೆಯಾಗಿದ್ದಾರೆ ?

*ಖಾಸಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಹತ್ತು ಹಲವು ಪ್ರಶ್ನೆಗಳ ಸುರಿಮಳೆಗೈದು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಚಾರ್ಜ್ ಮಾಡಿದ ವೃತ ನಿರೀಕ್ಷಕ ಚಂದ್ರಶೇಖರ್ ಮತ್ತು ಪಿಎಸ್ಐ ಚೇತನ್ ಕುಮಾರ್
ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು ರವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಭೆ ಮಾಡಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಹುಲ್ಲಹಳ್ಳಿ ಪೊಲೀಸರು ಬೆವರಳ್ಳಿಸಿದ್ದಾರೆ.


ಪೊಲೀಸರ ಖಡಕ್ ಎಚ್ಚರಿಕೆಗೆ ತಬ್ಬಿಬಾದ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಯಾವುದೇ ಉತ್ತರ ನೀಡದೆ ಮೌನಕ್ಕೆ ಶರಣಾಗಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಾದ ನೀವು ಸಾಲ ನೀಡಿದ್ದೀರಿ ಆದರೆ ಅದನ್ನು ಕಾನೂನು ಬದ್ಧವಾಗಿ ವಸೂಲಾತಿಗೆ ಮುಂದಾಗಬೇಕು.
ಸಾಲ ನೀಡಿದ್ದೇವೆ ಎಂದು ಯಾವುದೇ ದರ್ಪ, ಕಿರುಕುಳ ನೀಡಬಾರದು. ಅವರ ಮನೆಯ ಮುಂಭಾಗಕ್ಕೆ ಹೋಗಿ ಬೆದರಿಕೆ ಹಾಕುವುದಾಗಲಿ ನೋಟೀಸ್ ಅಂಟಿಸುವುದಾಗಲಿ ಮಾಡಬಾರದು.
ಹಾಗೇನಾದರೂ ಮಾಹಿತಿ ಕಂಡು ಬಂದಲ್ಲಿ ತಹಸೀಲ್ದಾರ್ ಅವರ ಆದೇಶದ ಮೇರೆಗೆ ಪೋಲಿಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ನಿಮ್ಮ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಭೆಯಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್, ಪಿಎಸ್ಐ ಚೇತನ್ ಕುಮಾರ್ ದಫೆದರ್ ದೊಡ್ಡಯ್ಯ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು