12:20 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಪ್ರತಿಷ್ಠಿತ ‘ರಾಮಜಾಲು ಗರಡಿ ಗೌರವ’ ಪ್ರಶಸ್ತಿ ಪ್ರದಾನ

23/01/2025, 14:22

ಪುತ್ತೂರು(reporterkarnataka.com): ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿರುವ ಇತಿಹಾಸ ಪ್ರಸಿದ್ಧ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದೇರುಗಳ ಜಾತ್ರೋತ್ಸವವು ಜರುಗಿತು. ಜಾತ್ರೋತ್ಸವದ ಅಂಗವಾಗಿ ನಡೆದ ಶ್ರೀ ಕೂರೇಲುಗುತ್ತು ಸುಬ್ಬಪ್ಪ ಪೂಜಾರಿ ಧರ್ಮಚಾವಡಿಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ, ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಧರ್ಮದ ಅರಿವು ನಮ್ಮಲ್ಲಿ ಬರಬೇಕಾದರೆ ನಾವು ಧರ್ಮ ಗ್ರಂಥಗಳನ್ನು ಓದುವವರಾಗಬೇಕು, ಕೇವಲ ಭಾಷಣದಿಂದ ನಮ್ಮಲ್ಲಿ ಧರ್ಮದ ಅರಿವು ಮೂಡಲು ಅಸಾಧ್ಯ ಪುಸ್ತಕ ಭಂಡಾರದಿಂದ ಹಾಗೂ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಮ್ಮಲ್ಲಿ ಧರ್ಮದ ಅರಿವು ಹೆಚ್ಚಾಗಲು ಸಾಧ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ರಾಮಜಾಲು ಗರಡಿಯ ಗೌರವವಾಗಿ “ರಾಮಜಾಲು ಗರಡಿ ಗೌರವ ಪ್ರಶಸ್ತಿ’ಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ಪ್ರದಾನ ಮಾಡಿದರು.
ಪ್ರತಿಷ್ಠಿತ “ರಾಮಜಾಲು ಗರಡಿ ಗೌರವ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು, “ರಾಮಜಾಲುವಿನ ಗರಡಿ ಜಾತ್ರೋತ್ಸವವನ್ನು ಕಂಡು ನನಗೆ ಬಹಳ ಸಂತೋಷವಾಗಿದೆ. ನನ್ನ ಬೆಳವಣಿಗೆಗೆ ಬೈದೇರುಗಳ ಆಶೀರ್ವಾದವೇ ಕಾರಣವಾಗಿದೆ. ಅವರ ಸೇವೆಯಿಂದಲೇ ನಾನು ಸಮಾಜದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ. ಇಂದು ನನಗೆ ಪ್ರದಾನ ಮಾಡಿದ ಈ ರಾಮಚಾಲು ಗರಡಿ ಗೌರವ ಪ್ರಶಸ್ತಿ ಇದು ನನಗೆ ಬೈದೇರುಗಳ ಪ್ರಸಾದವಾಗಿದೆ. ಸಮಾಜದಲ್ಲಿ ನನಗೆ ಇನ್ನಷ್ಟೂ ಸೇವೆ ಮಾಡಲು ಈ ಪ್ರಶಸ್ತಿ ಪ್ರೋತ್ಸಾಹ ನೀಡಿದೆ ಎಂದು ಹೇಳಿ ಕೃತಜ್ಞತೆ ಸಲ್ಲಿಸಿದರು. ಸಂಜೀವ ಪೂಜಾರಿಯವರ ಕಾರ್ಯಕ್ರಮ ವ್ಯವಸ್ಥೆಯನ್ನು ಕಂಡು, ಬಹಳ ಋಷಿ ಆಯಿತು. ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರತಿಯೊಬ್ಬರನ್ನು ಕೂಡ ಗೌರವಿಸುತ್ತಿರುವುದು ಅವರ ಬೆಳವಣಿಗೆಗೆ ಕಾರಣವಾಗಿದೆ ಎಂದು ಹೇಳಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು, ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆಯಾದ ಶಯನಾ ಜಯಾನಂದ್‌ರವರು, ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಆಡಳಿತ ಮೊಕ್ತೇಸರರಾದ ಕೆ. ಸಂಜೀವ ಪೂಜಾರಿ ಕೂರೇಲುರವರು, ಕೂರೇಲು ಸಂಜೀವ ಪೂಜಾರಿಯವರ ಪತ್ನಿ ಸರಸ್ವತಿ ಸಂಜೀವ ಪೂಜಾರಿ ಕೂರೇಲು ಪುತ್ತೂರು ಅಕ್ಷಯ ಕಾಲೇಜಿನ ಸಂಚಾಲಕರಾದ ಜಯಂತ ನಡುಬೈಲ್ ಮತ್ತಿತ್ತರರು ಉಪಸ್ಥಿತರಿದ್ದರು.
ಅಭಿಜ್ಞಾ ಭಟ್ ಪ್ರಾರ್ಥಿಸಿದರು. ಹರ್ಷಿತ್ ಕುಮಾರ್ ಕೂರೇಲು ಸ್ವಾಗತಿಸಿದರು. ನೇಮಾಕ್ಷ ಸುವರ್ಣ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು