11:32 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬಿಜೈ ಯುನಿಸೆಕ್ಸ್ ಸಲೂನ್ ಗೆ ತಂಡದಿಂದ ದಾಳಿ: ಸಿಬ್ಬಂದಿಗಳ ಮೇಲೆ ಹಲ್ಲೆ; ಪೀಠೋಪಕರಣಗಳಿಗೆ ಹಾನಿ

23/01/2025, 17:20

ಮಂಗಳೂರು(reporterkarnataka.com): ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಯುನಿಸೆಕ್ಸ್ ಸಲೂನ್ ಗೆ ತಂಡವೊಂದು ಗುರುವಾರ ದಾಳಿ ನಡೆಸಿ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ,ಪೀಠೋಕರಣಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ.
ಕಲರ್ಸ್ ಯುನಿಸೆಕ್ಸ್ ಸಲೂನ್ ಗೆ ಸುಮಾರು 9-10 ಅಪರಿಚಿತ ವ್ಯಕ್ತಿಗಳ ತಂಡ ಕಾನೂನುಬಾಹಿರವಾಗಿ ಪ್ರವೇಶಿಸಿ ಸೆಲೂನಿನ ಪೀಠೋಕರಣಗಳಿಗೆ ಹಾನಿ ಮಾಡಿದೆ. ಅವರು ಅನೈತಿಕ ಚಟುವಟಿಕೆಗಳನ್ನು ಆರೋಪಿಸಿ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಗುಂಪು ಸಲೂನಿನ ಸೊತ್ತುಗಳಿಗೆ ಹಾನಿಯುಂಟು ಮಾಡಿದೆ.


ಈ ವೇಳೆ ಇಬ್ಬರು ಸಿಬ್ಬಂದಿಯ ಮೇಲೂ ಹಲ್ಲೆಯೂ ನಡೆದಿದೆ. ಒಳನುಗ್ಗಿದವರಲ್ಲಿ ಒಬ್ಬರು ಈ ಘಟನೆಯನ್ನು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ ಎಂದು ಸೆಲೂನ್ ಮಾಲಿಕನ ದೂರು ನೀಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು