11:26 PM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ನೀರಾವರಿಗೆ ಹೆಚ್ಚಿನ ಪ್ರಾಮುಖ್ಯತೆ: ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ

23/01/2025, 22:03

*1274 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ: ಸಿ.ಎಂ ಸಿದ್ದರಾಮಯ್ಯ*

*ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಗೋವಿಂದ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ ಬಳಿಕ ವಂಚಿಸಿದರು: ಸಿ.ಎಂ*

ಹಿರಿಯೂರು(reporterkarnataka.com): ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ ಬಳಿಕ ವಂಚಿಸಿದರು. ಈ ಯೋಜನೆಗೆ 5300 ಕೋಟಿ ರೂಪಾಯಿ ಕೊಡುವುದಾಗಿ ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಆದರೆ ನಯಾಪೈಸೆ ಬಿಡುಗಡೆಗೊಳಿಸದೆ ಈ ಭಾಗದ ಜನ ಸಮುದಾಯಕ್ಕೆ ಗೋವಿಂದ ಕಾರಜೋಳ ಮತ್ತು ಕೇಂದ್ರ ಸರ್ಕಾರ ವಂಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನಾದರೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಚರ್ಚಿಸಿ ಕೊಟ್ಟ ಮಾತಿನಂತೆ 5300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಸಿ ಎಂದು ಸವಾಲು ಹಾಕಿದರು.
ಬಿಜೆಪಿ ಕೊಟ್ಟ ಮಾತಿಗೆ ವಂಚಿಸುತ್ತದೆ. ನಾವು ಕೊಟ್ಟ ಮಾತು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ.
ಚುನಾವಣೆ ವೇಳೆ ಕೊಟ್ಟ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ರಾಜ್ಯದ ಬಡವರು, ಮಧ್ಯಮ ವರ್ಗದವರು ಸೇರಿ ಎಲ್ಲಾ ಜನ ಸಮುದಾಯಗಳ ನಂಬಿಕೆ ಉಳಿಸಿಕೊಂಡಿದ್ದೇವೆ. ಇದೇ ನಮಗೂ ಬಿಜೆಪಿಗೂ ಇರುವ ವ್ಯತ್ಯಾಸ ಎಂದರು.‌
ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದಿದ್ದು ಸರ್ಕಾರದಿಂದ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿದ್ದೇವೆ. 115 ವರ್ಷಗಳ ಇತಿಹಾಸ ಇರುವ, ರಾಜ್ಯದಲ್ಲಿ ನಿರ್ಮಾಣ ಆದ ಮೊದಲ ಜಲಾಶಯ ಇದಾಗಿದ್ದು ಮೂರನೇ ಬಾರಿ ಕೋಡಿ ಬಿದ್ದಿದೆ.
ಅಂದಿನ‌ ಮಹಾರಾಣಿ ಅಮ್ಮಣ್ಣಿ ತಾಯಿ ತಮ್ಮ ಒಡವೆಗಳನ್ನು ಮಾರಿ 45 ಲಕ್ಷ ರೂಪಾಯಿ ಖರ್ಚು ಮಾಡಿ ಈ ಜಲಾಶಯ ನಿರ್ಮಿಸಿದ್ದಾರೆ. ಇದು 30 ಸಾವಿರ ಎಕರೆ ಕೃಷಿ ಭೂಮಿಗೆ ನೀರು ಒದಗಿಸುತ್ತಿದೆ. ಹೀಗಾಗಿ ರಾಣಿ ಅಮ್ಮಣ್ಣಿಯವರನ್ನು ನಾವು ಸ್ಮರಿಸುತ್ತೇವೆ, ಧನ್ಯವಾದ ಅರ್ಪಿಸುತ್ತೇವೆ ಎಂದರು.
ಜಲ ಸಂಪನ್ಮೂಲ ಸಚಿವರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೇರಿ ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು