7:18 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ, ಬಿಜೆಪಿ ಹೋರಾಟ ಮತ್ತೆ ಆರಂಭ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

24/01/2025, 19:01

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು*

ಬೆಂಗಳೂರು(reporterkarnataka.com): ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್‌ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇದರಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರುವುದನ್ನು ಮುಚ್ಚಿಹಾಕಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.
ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಾರೆ. ಪೊಲೀಸರಿಗೂ ವರ್ಗಾವಣೆ, ಬಡ್ತಿ ಬೇಕಿರುತ್ತದೆ. ಆದ್ದರಿಂದ ಈ ರೀತಿ ತನಿಖೆ ನಡೆಯುತ್ತಿದೆ. ಪೊಲೀಸರು ವರದಿ ನೀಡಿದರೂ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ ಎಂದರು.
ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್‌ ಚಿಟ್‌ ನೀಡಿರುವಾಗ ಮುಖ್ಯಮಂತ್ರಿಗೆ ಕ್ಲೀನ್‌ ಚಿಟ್‌ ನೀಡುವುದು ಖಚಿತ. ಆದ್ದರಿಂದ ಹೋರಾಟವನ್ನು ಮತ್ತೆ ಆರಂಭಿಸುತ್ತೇವೆ. ತನಿಖೆಯನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
*ಸುಳ್ಳು ಸುದ್ದಿ:* ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ. ನಮ್ಮಲ್ಲಿ ಯಾವುದೇ ಟೀಮ್‌ ಇಲ್ಲ. ನಾನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಯಾವುದೇ ದೂರು ನೀಡಿಲ್ಲ. ಆದರೂ ದೂರು ನೀಡಿದ್ದೇನೆ ಎಂದು ಸುಳ್ಳಾಗಿ ಪತ್ರಿಕೆಯಲ್ಲಿ ಬರೆಯಲಾಗಿದೆ. ಒಕ್ಕಲಿಗರು ಪ್ರತ್ಯೇಕವಾಗಿ ಸಭೆ ಮಾಡಿಲ್ಲ ಅಥವಾ ಗುರುತಿಸಿಕೊಂಡಿಲ್ಲ. ಇದು ಕೂಡ ಸುಳ್ಳು ಸುದ್ದಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು