7:59 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ: ಮಾರ್ಚ್ 23ರ ವರೆಗೆ ನಿರ್ಬಂಧ

24/01/2025, 23:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನ ಹೃದಯ ಭಾಗದಲ್ಲಿ ಪ್ರತಿಭಟನೆ, ಧರಣಿಗೆ ಅವಕಾಶ ನಿರಾಕರಿಸಲಾಗಿದೆ. ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಸಿದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ
ಆದೇಶ ಹೊರಡಿಸಿದ್ದಾರೆ.
ದಿಢೀರ್ ಪ್ರತಿಭಟನೆ, ಧರಣಿ, ಮುಷ್ಕರ, ‌ರಸ್ತೆ ತಡೆಯಿಂದ‌ ಜಿಲ್ಲಾಡಳಿತ ಹೈರಾಣು ಆಗಿರುವ ಹಿನ್ನೆಲೆಯಲ್ಲಿ
ಕಾನೂನು ಸುವ್ಯವಸ್ಥೆ ಪಾಲನೆಗೆ ಪ್ರತಿಭಟನೆ , ಮುಷ್ಕರ, ರಸ್ತೆ ತಡೆಗೆ ಬ್ರೇಕ್ ಹಾಕಲಾಗಿದೆ. ನಗರದ ಹೃದಯ ಭಾಗವಾದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ ಹೊರಡಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿ, ಬಡಾಮಖಾನ್ ದರ್ಗಾ‌ ಕೂಡ ಇರುವುರಿಂದ ಕಾನೂನು ಸೂಕ್ಷ್ಮತೆಯಿಂದ ನಿರ್ಬಂಧದ ಆದೇಶ ನೀಡಲಾಗಿದೆ.
ರಾಜಕೀಯ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಕೈಗೊಳ್ಳುವುದು ಕಷ್ಟಕರ ಎಂದು ಉಲ್ಲೇಖಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ 100 ಮೀಟರ್ ಯಾವುದೇ ಪ್ರತಿಭಟನೆ, ಧರಣಿ ನಡೆಸಿದಂತೆ ನಿರ್ಬಂಧಿಸಲಾಗಿದೆ. ಮಾರ್ಚ್ 23ರ ವರೆಗೂ ನಿರ್ಬಂಧ ವಿಧಿಸಿ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು