4:11 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್‌ ಅಪಹರಣ; 6 ಕೋಟಿ ರೂ. ಹಣದ ಬೇಡಿಕೆ 

25/01/2025, 15:58

ಬಳ್ಳಾರಿ(reporterkarnataka.com): ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್‌ ಅವರನ್ನು ದುಷ್ಕರ್ಮಿಗಳು ಶನಿವಾರ ಮುಂಜಾನೆ 6 ಗಂಟೆ ವೇಳೆಗೆ ಅಪಹರಿಸಿದ್ದು, ಭಾರೀ ಹಣದ ಬೇಡಿಕೆ ಇಟ್ಟಿದ್ದಾರೆ.
ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ. ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 6 ಕೋಟಿ ರೂ. ನಗದು ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಾಗಿದೆ. 
ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. 
ಬಳ್ಳಾರಿ ಹೊರ ವಲಯದ ಮೋಕಾ ಕಡೆಗೆ ಅಪಹರಣಕಾರರು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಈ ಮಾರ್ಗದ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ತೀವ್ರಗೊಳಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ಜಿಲ್ಲೆಯ ಪ್ರಮುಖ ಪೊಲೀಸ್‌ ಅಧಿಕಾರಿಗಳನ್ನು ತನಿಖೆಯಲ್ಲಿ ತೊಡಿಗಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ. 
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖಾ ತಂಡಕ್ಕೆ ಸಲಹೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು