12:19 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಿಲ್ಲಿಸಿ: ಪೊಲೀಸ್ ಕಮಿಷನರ್ ಗೆ ಶಾಸಕ ಕಾಮತ್ ಆಗ್ರಹ

25/01/2025, 20:20

ಮಂಗಳೂರು(reporterkarnataka.com):ನಗರದಾದ್ಯಂತ ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ, ಅನೈತಿಕ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ‌ಅವರು ನಗರ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜಿಲ್ಲೆಯಲ್ಲಿ ಅನೈತಿಕ ಚಟುವಟಿಕೆಗಳು ಯಾವುದೇ ಭಯವಿಲ್ಲದೇ ನಡೆಯಲಾರಂಭಿಸಿವೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಮಂಗಳೂರು ರವರು ನನ್ನ ಸಹಿತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೂ ಮನವಿ ಸಲ್ಲಿಸಿದ್ದು ಅವರ ಕಾಳಜಿಗೆ ನನ್ನ ಸಂಪೂರ್ಣ ಸಹಕಾರವಿದೆ. ನಿಯಮಬದ್ಧವಾಗಿ ನಡೆಯುವ ಯುನಿಸೆಕ್ಸ್ ಸಲೂನ್ ಗಳಿಗೆ ಯಾರದ್ದೂ ಅಭ್ಯಂತರವಿಲ್ಲ. ಆದರೆ ಯುನಿಸೆಕ್ಸ್ ಸೆಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ, ಅನೈತಿಕ ದಂಧೆಗಳಿಗೆ ಎಲ್ಲರ ವಿರೋಧವಿದ್ದು ಇಂತಹವುಗಳ ಪರವಾನಿಗೆಯನ್ನೇ ರದ್ದುಗೊಳಿಸಬೇಕು ಎಂದರು.
ಅಪ್ರಾಪ್ತ ವಯಸ್ಸಿನ ಮಕ್ಕಳು ಸಹ ಈ ದಂಧೆಯ ಬಲಿಪಶುಗಳಾಗುತ್ತಿರುವುದು ಗಂಭೀರ ಸ್ವರೂಪದ್ದಾಗಿದ್ದು ಇನ್ನೂ ಸಹ ನಿರ್ಲಕ್ಷ್ಯ ವಹಿಸಿ ಮತ್ತೇನಾದರೂ ಅಹಿತಕರ ಘಟನೆಗಳು ನಡೆದರೆ ಅದರ ನೇರ ಹೊಣೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆಯೇ ಹೊರಬೇಕಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು