10:02 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಕುಂಠಿತಕ್ಕೆ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆ ಕಾರಣ: ಜಿಲ್ಲಾ ನ್ಯಾಯಾಧೀಶರು

26/01/2025, 23:12

ಮಂಗಳೂರು(reporterkarnataka.com):ಚುನಾವಣೆಗಳಲ್ಲಿ ಶಿಕ್ಷಿತರು ಮತ್ತು ಶ್ರೀಮಂತರ ಪ್ರದೇಶಗಳಲ್ಲಿಯೇ ಮತದಾನ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು ಅವರಲ್ಲಿ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆಯ ದ್ಯೋತಕವಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಹೇಳಿದ್ದಾರೆ.
ಅವರು ಶನಿವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮತದಾನ ಮಾಡಲು ಚುನಾವಣಾ ಆಯೋಗವು ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿದ್ದರೂ ಮತದಾನ ಮಾಡಲು ಮುಂದೆ ಬಾರದಿರುವುದು ಸಂವಿಧಾನಕ್ಕೆ ಮಾಡುವ ಅಗೌರವವಾಗಿದೆ. ಬಡವರು ಮತ್ತು ಅಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಹೆಚ್ಚಿನ ಪ್ರಮಾಣ ನಡೆಯುತ್ತದೆ. ಆದರೆ, ಶಿಕ್ಷಿತರು ಮತ್ತು ಸಿರಿವಂತರ ಪ್ರದೇಶಗಳಲ್ಲಿ ಅಂತಹ ಉತ್ಸಾಹ ಇರುವುದಿಲ್ಲ. ಕೇವಲ ಶಿಕ್ಷಣ ಮಾತ್ರ ಇದ್ದರೆ ಸಾಲದು, ಪ್ರಜ್ಞೆ ಮತ್ತು ಬುದ್ಧಿವಂತಿಕೆ ಇರಬೇಕು ಎಂದು ನ್ಯಾಯಾಧೀಶರು ತಿಳಿಸಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸವ೯ರಿಗೂ ಸಮಾನ ಮತದಾನದ ಹಕ್ಕನ್ನು ನೀಡಿದ ಜಗತ್ತಿನ ಮೊದಲ ದೇಶ ಭಾರತ. ಪ್ರಜಾಪ್ರಭುತ್ವದ ಹಳೆಯ ದೇಶಗಳಲ್ಲಿ ಉಳ್ಳವರಿಗೆ ಮಾತ್ರ ಸೀಮಿತವಾಗಿದ್ದ ಮತದಾನದ ಹಕ್ಕು, ಜನಸಾಮಾನ್ಯರಿಗೆ ಸಿಗಲು ಅಲ್ಲಿ ಸಾಕಷ್ಟು ಹೋರಾಟಗಳು ನಡೆಯಬೇಕಾಯಿತು. ಆದರೆ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ಆರಂಭದಲ್ಲಿಯೇ ಎಲ್ಲರಿಗೂ ಮತದಾನದ ಹಕ್ಕು ದೊರೆಯಿತು ಎಂದರು.


ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಲೋಕಸಭಾ ಚುನಾವಣೆ ಅಚ್ಚುಕಟ್ಟಾಗಿ ನಿವ೯ಹಿಸಲಾಗಿದೆ. ಮತದಾರರ ನೋಂದಣಿಗೆ ನಾಲ್ಕು ಅಹ೯ತಾ ದಿನಾಂಕ ನಿಗದಿಪಡಿಸಲಾಗಿದೆ. ಇದನ್ನು ಉಪಯೋಗಿಸಿ ಪ್ರತಿಯೊಬ್ಬರು ನೋಂದಣಿ ಮಾಡಬೇಕು ಎಂದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಡಾ. ಆನಂದ್ ಅವರು ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ,‌ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಚುನಾವಣಾ ತಹಶೀಲ್ದಾರ್ ದಯಾನಂದ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಸ್ವಾಗತಿಸಿದರು. ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ನೋಂದಾಯಿಸಿದವರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು