7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿಗೆ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

27/01/2025, 16:15

ಬೆಂಗಳೂರು(reporterkarnataka.com): ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, “ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು.
ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಕೇಳಿದಾಗ, ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ. ಈ ಕುರಿತಾಗಿ ಬಂದಿರುವ ನ್ಯಾಯಾಲಯದ ತೀರ್ಪುಗಳನ್ನು ನನ್ನ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದರು.
*ಸರ್ಕಾರ ಸುಭದ್ರವಾಗಿದೆ:*
ಸಿಎಂ ಹುದ್ದೆ ವಿಚಾರವಾಗಿ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ,ಆ ರೀತಿಯಾಗಿ ಯಾರೂ ಏನೂ ಮಾತನಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು