8:58 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ; ಒಟ್ಟು 18.314 ಕೆಜಿ ಚಿನ್ನಾಭರಣ, 3.80 ಲಕ್ಷ ರೂ. ನಗದು ವಶ: ಪೊಲೀಸ್ ಕಮಿಷನರ್

27/01/2025, 18:53

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 18.314 ಕೆಜಿ ಚಿನ್ನಾಭರಣ ಹಾಗೂ 3.80 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.



ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಪದ್ಮನೇರಿಯ ಅಮ್ಮನ್ ಕೋವಿಲ್ ನ ಮುರುಗಂಡಿ ಥೇವರ್ (36 ), ಮುಂಬೈನ ಡೊಂಬಿವಿಲಿ ಪಶ್ಚಿಮದ ಗೋಪಿನಾಥ್ ಚೌಕ್ ನ ಯೋಸುವ ರಾಜಂದ್ರನ್ (35), ಮುಂಬೈ ಚೆಂಬೂರು ತಿಲಕನಗರದ ಕಣ್ಣನ್ ಮಣಿ (36), ಮುರುಗಂಡಿಗೆ ಆಶ್ರಯ ನೀಡಿದ್ದ ಆತನ ತಂದೆ ಎಂ.ಷಣ್ಮುಗಸುಂದರಂ ಸೇರಿ 4 ಮಂದಿಯನ್ನು ಬಂಧಿಸಿದ್ದೇವೆ ಎಂದು ಕಮಿಷನರ್ ಹೇಳಿದರು.
ಮುರುಗಂಡಿ 2024ರ ಆಗಸ್ಟ್ ನಲ್ಲಿ ಕೆ.ಸಿ.ರೋಡ್ ಗೆ ಬಂದು ಕೋಟೆಕಾರು ವ್ಯವಸಾಯ ಸೇವಾ ಸಂಘದ ಶಾಖೆಯನ್ನು ನೋಡಿ ಹೋಗಿದ್ದ. ನಂತರ ಅಕ್ಟೋಬರ್ ನಲ್ಲಿ ಅವರ ತಂಡದ ಕೆಲವರು ಮತ್ತೊಮ್ಮೆ ಕೆ.ಸಿ.ರೋಡ್ ಗೆ ಬಂದಿದ್ದರು. ಬಳಿಕ ನ.27ರಂದು ಯೊಸುವಾ ರಾಜೆಂದ್ರನ್ ಮತ್ತು ಮುರುಗಂಡಿ ಮತ್ತೆ ಕೆ.ಸಿ. ರೋಡ್ ಗೆ ಬಂದು ದರೋಡೆಗೆ ಸಂಚು ರೂಪಿಸಿದ್ದರು. ಶುಕ್ರವಾರ ಮಧ್ಯಾಹ್ನ ಸ್ಥಳದಲ್ಲಿ ಜನ ಓಡಾಟ ಕಡಿಮೆ ಇರುವುದರಿಂದ ಕೃತ್ಯಕ್ಕೆ ಆ ದಿನವನ್ನೇ ಆಯ್ಕೆ ಮಾಡಿದ್ದರು ಎಂದು ತಿಳಿಸಿದರು
ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಕೃತ್ಯಕ್ಕೆ ಬಳಸಿದ ಕಾರು ಮುಂಬೈ ನೋಂದಣಿ ಹೊಂದಿರುವುದು ತಿಳಿಯಿತು. ಈ ಮಾಹಿತಿ ಆಧಾರದಲ್ಲಿ ಮುಂಬೈಗೆ ನಮ್ಮ ಪೊಲೀಸರ ತಂಡ ತೆರಳಿತ್ತು. ಅಷ್ಟರಲ್ಲಿ ಅರೋಪಿಗಳು ತಮಿಳುನಾಡಿಗೆ ಪರಾರಿಯಾಗಿದ್ದರು. ನಂತರ ಪೊಲೀಸರು ತಮಿಳುನಾಡಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನವನ್ನು ತಮಿಳುನಾಡಿನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು