ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿ ಕಾಡ್ಗಿಚ್ಚು ತಡೆಯಲು ಅರಣ್ಯ ಇಲಾಖೆಯಿಂದ ಕೊನೆಗೂ ಸಿಬ್ಬಂದಿಗಳ ನಿಯೋಜನೆ
27/01/2025, 22:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಡ್ಗಿಚ್ಚು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಕೊನೆಗೂ ನಿಯೋಜನೆ ಮಾಡಿದೆ.
ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಡ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ.
ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಡ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು.
ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ. ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.