5:05 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕೊಠಡಿ ಉದ್ಘಾಟನೆ

28/01/2025, 11:55

ಮಂಗಳೂರು(reporterkarnataka.com): ನಗರದ ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ 8 ಕೊಠಡಿಗಳು ಮಾತ್ರವಲ್ಲದೇ ಇಲ್ಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕೊಠಡಿಗಳಿಗೆ ಒಟ್ಟಾರೆಯಾಗಿ 2.60 ಕೋಟಿ ರೂಪಾಯಿ ಅನುದಾನ ಮಂಜೂರುಗೊಳಿಸಿ ಭೂಮಿಪೂಜೆ ನೆರವೇರಿಸಲಾಗಿತ್ತು. ಇದೀಗ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆಗೊಂಡಿರುವ ಕಾಲೇಜಿನ ವಿವೇಕ ತರಗತಿ ಕೊಠಡಿಗಳಲ್ಲಿ ವಿವೇಕಾನಂದರಂತಹ ಜ್ಞಾನಿಗಳು ಮೂಡಿ ಬರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎಂ. ಪುರುಷೋತ್ತಮ ಭಟ್, ಪಾಲಿಕೆ ಸದಸ್ಯರುಗಳಾದ ಕಿಶೋರ್ ಕೊಟ್ಟಾರಿ, ವನಿತಾ ಪ್ರಸಾದ್, ಕಾಲೇಜಿನ ಪ್ರಾಂಶುಪಾಲರಾದ ಜಯಾನಂದ ಎನ್. ಸುವರ್ಣ ಹಾಗೂ ಉಪನ್ಯಾಸಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು