3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ದೇವದಾಸಿ ಪದ್ಧತಿ ಈಗಲೂ ಆಚರಣೆಯಾದರೆ ಜಿಲ್ಲಾಧಿಕಾರಿ, ಎಸ್ಪಿ ವಿರುದ್ದ ಮುಲಾಜಿಲ್ಲದೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

28/01/2025, 14:27

ಬೆಂಗಳೂರು(reporterkarnataka.com): ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಯವರು ಅವರು ಅಧಿಕಾರಿಗಳಿಗೆ ಎಚ್ವರಿಕೆ ನೀಡಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಸಿಎಂ ಪ್ರಶ್ನಿಸಿದರು.
ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ. ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿಎಂ ಸೂಚಿಸಿದರು.
ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.


ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೊತೀವಿ ಎಂದರು.
ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು.
ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ.ವಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
ಪ್ರತೀ 6 ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು