11:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಖೇದ

28/01/2025, 19:15

ಬೆಂಗಳೂರು(reporterkarnataka.com): ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದರು.
ಅವರು ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ 3℅ ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು DCRE ಸೆಲ್ ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಲು ಸಿಎಂ ಸೂಚಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ, ಕೌಂಟರ್ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಅಸಮಾಧಾನದಿಂದ ಸಭೆಯಲ್ಲಿ ಪ್ರಶ್ನಿಸಿದರು. 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು. ಬಳಿಕ ಈ ಬಗ್ಗೆ ತಾವು ತೀವ್ರವಾಗಿ ಗಮನಿಸಿ ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವ ದಿಕ್ಕಿನಲ್ಲಿ ಗಮನ ಹರಿಸುವುದಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು