10:38 AM Thursday30 - January 2025
ಬ್ರೇಕಿಂಗ್ ನ್ಯೂಸ್
ಕೇಂದ್ರ – ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಮಾಜಿ… ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ… ನಂಜನಗೂಡು: 5 ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಎಫ್ ಐಆರ್; 4 ಮಂದಿ… ಬಿಜೆಪಿ 12ನೇ ಶತಮಾನದಲ್ಲಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿತ್ತು: ಸಚಿವ… ನಂಜನಗೂಡು: ಶ್ರದ್ಧಾಭಕ್ತಿಯಿಂದ ನಡೆದ ಸುತ್ತೂರು ಜಾತ್ರಾ ರಥೋತ್ಸವ; 40 ಜಾನಪದ ತಂಡಗಳ ಮೆರುಗು ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಖೇದ ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಾಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ: ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ ಮತ್ತೊಂದು ಜೀವಬಲಿ; ಭಾರೀ… ಕೋಟೆಕಾರು ದರೋಡೆ ಪ್ರಕರಣ; ಒಟ್ಟು 18.314 ಕೆಜಿ ಚಿನ್ನಾಭರಣ, 3.80 ಲಕ್ಷ ರೂ.… ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿಗೆ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಇತ್ತೀಚಿನ ಸುದ್ದಿ

ಬ್ಯಾಂಕುಗಳಲ್ಲಿ ಕನ್ನಡಿಗರ ಅನುಪಸ್ಥಿತಿ ಆತಂಕಕಾರಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ

28/01/2025, 23:19

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ (ಎಸ್ ಎಲ್ ಬಿ ಸಿ) ಯ ಅಧಿಕಾರಿಗಳೊಂದಿಗೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿಗೆ ತಾವು ಕೇಂದ್ರ ಸಚಿವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಪಡೆದ ಭರವಸೆಯಂತೆ ಬ್ಯಾಂಕುಗಳು ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸುವುದು ಬಹಳ ಮುಖ್ಯವಾಗಿದ್ದು, ಇದು ವಿಳಂಬವಾದಲ್ಲಿ ನಾಡಿನೆಲ್ಲೆಡೆ ಸಾಮಾಜಿಕ ಸಂಘರ್ಷ ಏರ್ಪಡಲಿದೆ. ಎಸ್ ಎಲ್ ಬಿ ಸಿ ಈ ನಿಟ್ಟಿನಲ್ಲಿ ಕೂಡಲೇ ತನ್ನ ಅಧೀನದ ಬ್ಯಾಂಕುಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದಿದ್ದಾರೆ.
*ಶೀಘ್ರದಲ್ಲಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ:*
ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆಯನ್ನು ಒದಗಿಸುವ ಮೂಲಕ ಬ್ಯಾಂಕುಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಬ್ಯಾಂಕುಗಳ ಪ್ರತಿನಿಧಿಗಳೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ವಿವರವಾದ ಸೂಚನೆಗಳನ್ನು ನೀಡಲಾಗುತ್ತದೆ ಎಂದ ಡಾ.ಬಿಳಿಮಲೆ ಇಷ್ಟರಲ್ಲಿಯೇ ಎಸ್ ಎಲ್ ಬಿ ಸಿ ಈ ಸಭೆಯನ್ನು ಆಯೋಜಿಸಲಿದೆ ಎಂದು ಹೇಳಿದ್ದಾರೆ.
ಬ್ಯಾಂಕುಗಳಲ್ಲಿ ನಿರ್ವಹಣೆಯಾಗುವ ಹೊರಗುತ್ತಿಗೆ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವುದು ಬಹುಮುಖ್ಯವಾಗಿದ್ದು, ಈ ಕುರಿತಂತೆ ಟೆಂಡರ್ ನಿಯಮಗಳಲ್ಲಿ ಸ್ಪಷ್ಟವಾಗಿ ಷರತ್ತುಗಳನ್ನು ವಿಧಿಸಬೇಕು. ಸ್ಥಳೀಯರಿಗೆ ನೇಮಕಾತಿ ನೀಡುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಎಸ್ ಎಲ್ ಬಿ ಸಿ ಪ್ರಸ್ತಾವನೆಯನ್ನು ಸಲ್ಲಿಸಬೇಕೆಂಬ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ ಡಾ. ಬಿಳಿಮಲೆ ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಬ್ಯಾಂಕುಗಳ ತರಬೇತಿ ಕೇಂದ್ರಗಳಲ್ಲಿ ಕನ್ನಡ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಕ್ರಮವಹಿಸಬೇಕೆಂದು ತಿಳಿಸಲಾಗಿದೆ ಎಂದಿದ್ದಾರೆ. ಈ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವೈಜ್ಞಾನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸಿರುವ ಪಠ್ಯಕ್ರಮವನ್ನು ಅವಶ್ಯಕತೆಗೆ ಅನುಗುಣವಾಗಿ ಒದಗಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು