11:32 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

29/01/2025, 14:47

*10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ*

*ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ: ಸಿಎಂ ಗೆ ದಾಖಲೆ ಸಮೇತ ವಿವರಿಸಿದ ಸಚಿವ ಕೃಷ್ಣಬೈರೇಗೌಡ*

ಬೆಂಗಳೂರು(reporterkarnataka.com):
ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ ಕುರಿತು ಮುಖ್ಯಮಂತ್ರಿ
ಸಿದ್ದರಾಮಯ್ಯ ಫುಲ್ ಖುಷ್ ವ್ಯಕ್ತಪಡಿಸಿದ್ದಾರೆ.
ಬರೀ quantity ವಿಲೇವಾರಿ ಸಾಲದು: quality ವಿಲೇವಾರಿ ಆದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್ ಬೀಳುತ್ತದೆ. ಈ ದಿಕ್ಕಲ್ಲಿ ಹೆಚ್ಚಿನ ಗಮನ ಹರಿಸಿ ಎಂದು ಸಚಿವ ಕೃಷ್ಣಬೈರೇಗೌಡರಿಗೆ ಸಿಎಂ ಸೂಚನೆ ನೀಡಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ನಡೆಸಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಇತರೆ ಮುಖ್ಯಾಂಶಗಳು…

•ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್‌ ಮೂಲಕ ಇದು ಸಾಧ್ಯವಾಗಿದೆ.

•ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್‌ ಪ್ಲಾನ್‌ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಲು ಸಿಎಂ ಸೂಚನೆ*

•ನಗರ ಪ್ರದೇಶಗಳಲ್ಲಿ ಮಾಸ್ಟರ್‌ ಪ್ಲಾನ್‌ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್‌, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*

*ಆದಷ್ಟು ಬೇಗನೆ ಮಾಸ್ಟರ್‌ ಪ್ಲಾನ್‌ ಸಿದ್ದಪಡಿಸಬೇಕು*

• ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು*

*ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 3ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು*

*ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು.

*DC ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಲ್ಲಿ ಕೇವಲ ಒಂದು ವರ್ಷದಲ್ಲಿ ಶೇ36 ರಷ್ಟು ಪ್ರಕರಣಗಳ ವಿಲೇವಾರಿ*

ಇತ್ತೀಚಿನ ಸುದ್ದಿ

ಜಾಹೀರಾತು