11:26 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

29/01/2025, 19:41

ಮೈಸೂರು(reporterkarnataka.com): ಕುಂಭಮೇಳದ ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ ವಿಚಾರ, ನಂಬಿಕೆಗಳು ಎಂದರೆ ಆಗಿ ಬರುವುದಿಲ್ಲ ಎಂದರು.
ಕಾಂಗ್ರೆಸ್ ನವರಿಗೆ ಟೀಕೆ ಮಾಡುವುದೇ ಕೆಲಸ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಮಾಡಿರುವ ಟೀಕೆ, ಪದ ಬಳಕೆ ಸರಿಯಿಲ್ಲ. ಕಾಂಗ್ರೆಸ್ ಗೆ ನಮ್ಮ ಧಾರ್ಮಿಕ ಆಚರಣೆಗಳ ಮೇಲೆ ನಂಬಿಕೆ ಇಲ್ಲ. ಅದಕ್ಕೆ ಈ ರೀತಿ ಮಾತನಾಡುತ್ತಾರೆ ಎಂದು
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಕುಮಾರಸ್ವಾಮಿ ಅವರು ಖಂಡಿಸಿದರು.
ಕಾಂಗ್ರೆಸ್ ನವರು ಬೆಳಗಾವಿಯಲ್ಲಿ ಜೈ ಬಾಪು, ಜೈ ಅಂಬೇಡ್ಕರ್, ಜೈ ಸಂವಿಧಾನ್ ಎಂದು ಕಾರ್ಯಕ್ರಮ ಮಾಡಿದರು. ಗಾಂಧೀಜಿಯವರ ಹೆಸರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿದರು. ಆದರೂ ಈಗ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಗಾಂಧೀಜಿ ಅವರ ಮೇಲೆ ಕಾಂಗ್ರೆಸಿಗರಿಗೆ ನಂಬಿಕೆ ಇದ್ದಿದ್ದರೆ ಇಂತಹ ಮಾತುಗಳು ಬರುತ್ತಿರಲಿಲ್ಲ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.
ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಡಾ.ಅನ್ನದಾನಿ, ಮಾಜಿ ಮೇಯರ್ ರವಿಕುಮಾರ್ ಮುಂತಾದವರು ಸಚಿವರ ಜತೆಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು