2:13 PM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಕುಂಭಮೇಳ: ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿಗಳು ಸೂಚಿಸಿದ್ದಾರೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

29/01/2025, 19:48

ಮೈಸೂರು(reporterkarnataka.com): ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಜತೆ ಮಾತನಾಡಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಎಂದು ಯೋಗಿ ಆದಿತ್ಯನಾಥ್‌ ಅವರಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ ಎಂದು ಸಚಿವರು ನೋವು ವ್ಯಕ್ತಪಡಿಸಿದರು.
*ಸಮಸ್ಯೆ ಇದ್ದರೆ ನಮ್ಮ ಕಚೇರಿ ಸಂಪರ್ಕಿಸಿ:*
ಕುಂಭಮೇಳದಲ್ಲಿ ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ಪಾಲ್ಗೊಂಡಿದ್ದು, ಯಾರಿಗೆ ಆದರೂ ಸಮಸ್ಯೆ ಆಗಿದ್ದರೆ ದೆಹಲಿಯಲ್ಲಿರುವ ನನ್ನ ಸಚಿವಾಲಯವನ್ನು ಸಂಪರ್ಕಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ.
ಯಾರಿಗೆ ಸಮಸ್ಯೆ ಆಗಿದ್ದರೂ ನನ್ನ ಸಂಪರ್ಕ ಮಾಡಲು ಹೇಳಿದ್ದೇನೆ. ಮಾಧ್ಯಮದ ಮೂಲಕ ಮತ್ತೆ ಮನವಿ ಮಾಡುತ್ತೇನೆ. ನಮ್ಮ ಅಧಿಕಾರಿಗಳಿಗೂ ಕೂಡ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು