9:51 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಪ್ರಯಾಗ್ ರಾಜ್ ದುರಂತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಂಬನಿ: ಬೆಳಗಾವಿ ಯಾತ್ರಿಗಳ ಸಾವಿಗೆ ಸಚಿವರ ಸಂತಾಪ

29/01/2025, 20:59

ಬೆಳಗಾವಿ(reporterkarnataka.com): ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.
ದುರಂತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ರಾಜ್ಯದ ಇನ್ನು ಕೆಲವು ಜನ ಗಾಯಗೊಂಡಿರುವ ಮಾಹಿತಿಯಿದ್ದು, ಎಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ರಾಜ್ಯ ಸರ್ಕಾರ ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು