4:42 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ ಬಂಧನ; ರಾಜ್ಯದ ಬ್ಯಾಂಕ್ ಅಧಿಕಾರಿಗಳೂ ಭಾಗಿ!

30/01/2025, 20:12

ಹೈದರಾಬಾದ್(reporterkarnataka.com): ಬೃಹತ್ ಸೈಬರ್ ವಂಚನೆ ಜಾಲವನ್ನು ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ಸಂಬಂಧಿಸಿದಂತೆ ಬ್ಯಾಂಕ್​ ಅಧಿಕಾರಿಗಳು ಸೇರಿದಂತೆ 52 ಮಂದಿಯನ್ನು ಬಂಧಿಸಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ 88.32 ಕೋಟಿ ರೂ. ಮೊತ್ತದ ಸೈಬರ್‌ ವಂಚನೆಯಲ್ಲಿ ಭಾಗಿಯಾಗಿದ್ದ ಪ್ರಕರಣ ಇದಾಗಿದೆ. ಸೈಬರ್ ವಂಚನೆ ಜಾಲಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು, ಹಣ ಅಕ್ರಮ ವರ್ಗಾವಣೆಗೆ ವಂಚಕರಿಗೆ ನೆರವು ನೀಡಿದ್ದ 3 ಮಂದಿ ಬ್ಯಾಂಕ್​ ಅಧಿಕಾರಿಗಳು ಸೇರಿದಂತೆ 52 ಮಂದಿಯ ದಸ್ತಗಿರಿ ಮಾಡಲಾಗಿದೆ.
ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಲ್ಲಿ 33 ಸೈಬರ್ ವಂಚನೆ ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತ ಬ್ಯಾಂಕ್​ ಅಧಿಕಾರಿಗಳಲ್ಲಿ ಕರ್ನಾಟಕದವರೂ ಸೇರಿಸಿದ್ದಾರೆ ಎನ್ನುವುದು ವಿಶೇಷವಾಗಿದೆ.
ಬಂಧಿತರು 88.32 ಕೋಟಿ ರೂ. ವಂಚಿಸಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ 47.90 ಲಕ್ಷ ರೂ. ನಗದು, 40 ಲಕ್ಷ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ, 39 ಎಟಿಎಂ ಕಾರ್ಡ್‌ಗಳು, 17 ಬ್ಯಾಂಕ್​ ಪಾಸ್‌ಬುಕ್‌ಗಳು, 54 ಚೆಕ್‌ಬುಕ್‌ಗಳು ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಆರೋಪಿಗಳ ಬ್ಯಾಂಕ್ ಖಾತೆಗಳಲ್ಲಿ 2.87 ಕೋಟಿ ರೂ. ಮೌಲ್ಯದ ನಗದು ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ. ಆನಂದ್ ಮಾಹಿತಿ ನೀಡಿದ್ದಾರೆ.
ಬಂಧಿತ ಬ್ಯಾಂಕ್​ ಅಧಿಕಾರಿಗಳನ್ನು ಬೆಂಗಳೂರು ಆರ್‌ಬಿಎಲ್ ಬ್ಯಾಂಕ್ ಉಪ ವ್ಯವಸ್ಥಾಪಕ
ಶುಭಂ ಕುಮಾರ್ ಝಾ, ಆಕ್ಸಿಸ್ ಬ್ಯಾಂಕ್ ಮಲ್ಲೇಶ್ವರಂ ಶಾಖೆಯ ಹರೂನ್ ರಶೀದ್ ಮತ್ತು ಆರ್. ಮೋಹನ್, ಕೋಟಕ್ ಮಹೀಂದ್ರ ಬ್ಯಾಂಕ್ ಹೈದರಾಬಾದ್ ಜೆಎನ್‌ಟಿಯು ಶಾಖೆಯ ಮಾರಾಟ ವ್ಯವಸ್ಥಾಪಕ ಕೆ. ಶ್ರೀನಿವಾಸ ರಾವ್ ಎಂದು ಗುರುತಿಸಲಾಗಿದೆ.
ಶುಭಂ ಕುಮಾರ್ ಝಾ ಮತ್ತು ಹರೂನ್ ರಶೀದ್ ಹಾಗೂ ಆರ್. ಮೋಹನ್ ಸೇರಿ ಯಾವುದೇ ದಾಖಲೆಗಳಿಲ್ಲದೇ ನೂರಾರು ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಸೈಬರ್ ಅಪರಾಧಿಗಳಿಗೆ ಸಹಾಯ ಮಾಡುತ್ತಿದ್ದರು. ಅವರು ಪ್ರತಿ ಖಾತೆಗೆ 50,000 ರೂ.ಗಳಿಂದ 80,000 ರೂ.ಗಳವರೆಗೆ ಕಮಿಷನ್ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಬಂಧಿತ ಬ್ಯಾಂಕ್​ ಅಧಿಕಾರಿಗಳು ಕಮಿಷನ್‌ ಆಸೆಗಾಗಿ ನಕಲಿ ಅಥವಾ ಗುಪ್ತ​​​​ (Mule) ಹೆಸರಿನಲ್ಲಿ ಬ್ಯಾಂಕ್‌ ಖಾತೆ ತೆರೆದು ವಂಚಕರಿಗೆ ಹಣ ಅಕ್ರಮವಾಗಿ ವರ್ಗಾಯಿಸಲು ಸಹಾಯ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಹೈದರಾಬಾದ್‌ನಾದ್ಯಂತ ವಿಶೇಷ ಪೊಲೀಸ್ ಕಾರ್ಯಾಚರಣೆ ನಡೆಸಿ ವಂಚಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು