4:41 PM Thursday5 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲು ವನ್ಯಜೀವಿ ಮಂಡಳಿ ಸಮ್ಮತಿ: ಅರಣ್ಯ ಸಚಿವ ಈಶ್ವರ ಖಂಡ್ರೆ

30/01/2025, 23:29

ಬೆಂಗಳೂರು(reporterkarnataka.com): ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ಅಂಗೀಕಾರ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.


ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, ಹೆಸರಘಟ್ಟವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಆಂದೋಲನವೂ ನಡೆದಿತ್ತು. ಪ್ರಕೃತಿ ಪರಿಸರ ಸಂರಕ್ಷಣೆಗೆ ಶ್ರಮಿಸುತ್ತಿರುವ ಸರ್ಕಾರ ಇಂದು ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದರು.
2021ರ ಜನವರಿ 19ರಂದು ನಡೆದಿದ್ದ 15ನೇ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಈ ಪ್ರಸ್ತಾಪ ತಿರಸ್ಕರಿಸಲಾಗಿತ್ತು. ರಾಜ್ಯ ಹೈಕೋರ್ಟ್ ಈ ಕುರಿತು ಪುನರ್ ನಿರ್ಣಯ ಕೈಗೊಳ್ಳುವಂತೆ ಸೂಚಿಸಿತ್ತು. ಬೆಂಗಳೂರು ಕಾಂಕ್ರೀಟ್ ಕಾಡಾಗಿ ಮಾತ್ರ ಬೆಳೆಯದೆ, ಹಚ್ಚ ಹಸುರಿನ ತಾಣವಾಗಿಯೂ ಉಳಿಯಬೇಕು ಎಂಬ ಮಹತ್ವದ ಉದ್ದೇಶದಿಂದ ನಮ್ಮ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.
ಹೆಸರಘಟ್ಟ ಹುಲ್ಲುಗಾವಲಿನ 356 ಎಕರೆ, ಬೈರಾಪುರ ಕೆರೆಯ 383 ಎಕರೆ, ಬೈತಾ ಕೆರೆಯ 165 ಎಕರೆ, ಹೆಸರಘಟ್ಟ ಕೆರೆಯ 1356 ಎಕರೆ ಮತ್ತು ಪಶುಸಂಗೋಪನಾ ಇಲಾಖೆಯವರ ಸ್ವಾಧೀನದಲ್ಲಿರುವ 2750 ಎಕರೆ ಸೇರಿ ಒಟ್ಟು. 5010 ಎಕರೆ ಪ್ರದೇಶವನ್ನು ವನ್ಯಜೀವಿ (ಸಂರಕ್ಷಣಾ) ಕಾಯ್ದೆ, 1972 ಸೆಕ್ಷನ್ 36ಎ ಪ್ರಕಾರ “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ”ವನ್ನಾಗಿ ಘೋಷಿಸಲು ಸಭೆ ಸಮ್ಮತಿಸಿದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು