12:27 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ; ಲಕ್ಷಾಂತರ ರೂ ವಂಚನೆ; ಆರೋಪಿ ಅಂದರ್

31/01/2025, 16:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಜನರು ಬೇಸತ್ತು ಗ್ರಾಮಗಳನ್ನು ತೊರೆಯುವುದರ ಜೊತೆಗೆ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಖತರ್ನಾಕ್ ಒಬ್ಬ ಸಾಲ ಕೊಡಿಸುವ ನೆಪದಲ್ಲಿ ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದ ಸುನಿಲ್ ಎಂಬುವವರೇ ಬಂಧಿತ ಆರೋಪಿ.

ಪ್ರತಿಷ್ಠಿತ ಫೈನಾನ್ಸ್ ಗಳಲ್ಲಿ ಹಾಗೂ ಸ್ಥಳೀಯ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ಲಕ್ಷಾಂತರ ರೂ ವಂಚಿಸಿದ ಐನಾತಿಯನ್ನ ಡಿವೈಎಸ್ಪಿ ರಘು ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್ ಹಾಗೂ ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಹಾಗೂ ದಫೆದಾರ್ ದೊಡ್ಡಯ್ಯ ಕಾರ್ಯಚರಣೆ ಮಾಡಿ ಬಂಧಿಸಿದ್ದಾರೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಆಕಲ ಗ್ರಾಮದ ಮಹಿಳೆಯೋರ್ವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸುನಿಲ್ ನನ್ನು ವಶಕ್ಕೆ ಪಡೆದಿದ್ದಾರೆ.
ಹುಲ್ಲಹಳ್ಳಿಯ ಕಲ್ಯಾಣಿ ಮೋಟಾರ್ಸ್ ನಲ್ಲಿ ಎಕ್ಸಿಕ್ಯುಟಿವ್ ಸೇಲ್ಸ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ಮಾದನಹಳ್ಳಿ ಸುನಿಲ್ ತನಗೆ ಪ್ರತಿಷ್ಠಿತ ಫೈನಾನ್ಸ್ ಗಳ ವ್ಯವಸ್ಥಾಪಕರು ಪರಿಚಯವಿದ್ದು ಲಕ್ಷಾಂತರ ರೂಪಾಯಿಗಳನ್ನ ಕಡಿಮೆ ಬಡ್ಡಿ ದರದಲ್ಲಿ ಕೊಡಿಸುವುದಾಗಿ ನಂಬಿಸಿ ಇದಕ್ಕಾಗಿ ಕಮೀಷನ್ ಕೊಡಬೇಕೆಂದು ಹೇಳಿದ್ದಾನೆ.
ಈತನ ಬೆಣ್ಣಿ ಮಾತಿಗೆ ಕರಗಿದ ಅಮಾಯಕ ಜನ ಮೊದಲೇ ಕಮಿಷನ್ ಹಣ ನೀಡಿದ್ದಾರೆ. ಸಾಕಷ್ಟು ಜನರಿಂದ ಹಣ ಪಡೆದಿದ್ದರೂ ಯಾವುದೇ ಸಾಲ ಕೊಡಿಸಿಲ್ಲವೆಂದು ಹೇಳಲಾಗಿದೆ.
ಅಲ್ಲದೆ ಕಮೀಷನ್ ಹೆಸರಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದಾನೆಂದು ತಿಳಿದು ಬಂದಿದೆ.
ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಶಾಕ್ ನಿಂದ ನರಳುತ್ತಿರುವ ಜನರಿಗೆ ಐನಾತಿಯ ವಂಚನೆ ಮತ್ತಷ್ಟು ಚಿಂತೆಗೀಡು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು