8:22 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಸಕಲೇಶಪುರ – ಮೂಡಿಗೆರೆ ಗಡಿಭಾಗದಲ್ಲಿ ಒಂಟಿ ಸಲಗ ಅನುಮಾನಾಸ್ಪದ ಸಾವು: ಅರಣ್ಯ ಅಧಿಕಾರಿಗಳು ಭೇಟಿ

31/01/2025, 22:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂಟಿ ಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಮತ್ತು ಮೂಡಿಗೆರೆ ಗಡಿಭಾಗದ ಗ್ರಾಮವಾದ ಮರಗುಂದದಲ್ಲಿ ನಡೆದಿದೆ.


ಸಕಲೇಶಪುರ ಅರಣ್ಯ ವಲಯ ವ್ಯಾಪ್ತಿಯ ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂದ ಗ್ರಾಮದ ಸಮೀಪ ಅರಣ್ಯದಲ್ಲಿ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.
ಮರಗುಂಡ ಬೆಟ್ಟದಭೈರವೇಶ್ವರ ದೇವಸ್ಥಾನದ ಸಮೀಪದ ಅರಣ್ಯದಲ್ಲಿ ಆನೆಯ ಮೃತದೇಹ ಬಂಡೆಕಲ್ಲುಗಳ ನಡುವೆ ಪತ್ತೆಯಾಗಿದೆ. ಆನೆ ಸಾವನ್ನಪ್ಪಿ ಅಂದಾಜು ಒಂದು ತಿಂಗಳು ಆಗಿರಬಹುದು ಎನ್ನಲಾಗಿದೆ.
ಕಾಡಾನೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶನಿವಾರ ಮುಂಜಾನೆ ಮೃತದೇಹದ ಕೊಳೆತ ವಾಸನೆ ಬಂದಿದ್ದರಿಂದ ಆನೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಗ್ರಾಮಸ್ಥರು ನೀಡಿದ ಮಾಹಿತಿಯನ್ನು ಆದರಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಮಹಜರು ನಡೆಸಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ ಇದು ಒಂಟಿಕೊಂಬಿನ ಆನೆಯಾಗಿದ್ದು, ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಓಡಾಡಿಕೊಂಡಿತ್ತು. ಜನರಿಗೆ ಹೆಚ್ಚೇನು ತೊಂದರೆ ಕೊಡುತ್ತಿರುಲಿಲ್ಲ ಎಂದು ಹೇಳುತ್ತಾರೆ.
ಕಾಡಾನೆ ಬಂಡೆ ಕಲ್ಲುಗಳ ನುಡವೆ ಸಿಲುಕಿ ಹೊರಬರಲಾರದೇ ಸಾವನ್ನಪ್ಪಿರಬಹುದು ಆಥವಾ ಬೇರೆ ಆನೆಗಳ ಜೊತೆ ಕಾದಾಡಿ ಸಾವನ್ನಪ್ಪಿರಬಹುದಾ, ಅನಾರೋಗ್ಯದಿಂದ ಸಾವನ್ನಪ್ಪಿರಬಹುದ ಅಥವಾ ಬೇರೆ ಯಾವ ರೀತಿಯಲ್ಲಾದರೂ ಸಾವನ್ನಪ್ಪಿರಬಹುದಾ ಎಂಬುದು ಮರಣೋತ್ತರ ಪರೀಕ್ಷೆ ಮತ್ತು ತನಿಖೆಯಿಂದಷ್ಟೇ ತಿಳಿದುಬರಬೇಕು.
ಆನೆಯ ಒಂಟಿ ದಂತವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬೇರ್ಪಡಿಸಿ ಇಲಾಖೆಯ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು