3:46 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೆ.ಆರ್.ಪೇಟೆ: ಹದಗೆಟ್ಟ ರಸ್ತೆ ..! ಸಾರ್ವಜನಿಕರು, ಅಂಗಡಿ ಮಾಲೀಕರ ಅಸಮಾಧಾನ

01/02/2025, 09:21

ಮಂಡ್ಯ(reporterkarnataka.com): ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹೊಸ ಕಿಕ್ಕೇರಿ ರಸ್ತೆಯಲ್ಲಿ ಕರ್ಣಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಸೇರಿದಂತೆ ಹಲವು ವಾಣಿಜ್ಯ ಅಂಗಡಿಗಳನ್ನು ಒಳಗೊಂಡಿದ್ದು ಈ ರಸ್ತೆಯಲ್ಲಿ ದಿನನಿತ್ಯ ಹಳ್ಳಿಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬ್ಯಾಂಕ್ ವ್ಯವಹಾರಕ್ಕೆ ಆಗಮಿಸುತ್ತಿದ್ದು ಅಲ್ಲಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು ವಾಹನಗಳು ಸಂಚರಿಸಲು ಸಾದ್ಯವಾಗುತ್ತಿಲ್ಲ.


ಈ ಮಾರ್ಗದಲ್ಲಿ ದಿನನಿತ್ಯ ಹಳ್ಳಿಯಿಂದ ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುತ್ತಿದ್ದು ಅಲ್ಲದೇ ಪ್ರಸಿದ್ಧ ಪುಣ್ಯಕ್ಷೇತ್ರವಾದ ಹೇಮಗಿರಿ, ಶ್ರೀ ಚಂದಗೋಳಮ್ಮ ದೇವಾಸ್ಥಾನಕ್ಕೆ ಹೆಚ್ಚು ಭಕ್ತರು ಸಂಚರಿಸುತ್ತಿದ್ದು ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸಲು ಕಷ್ಟವಾಗಿದ್ದು ಅಂಗಡಿಯ ಮಾಲೀಕರು ಅಲ್ಲಲ್ಲಿ ಕಲ್ಲು-ಮಣ್ಣು ಹಾಕಿದರೂ ಸಹ ದಿನೇ ದಿನೇ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿದೆ, ಅಲ್ಲದೇ ಸ್ಥಳೀಯ ಜನಪ್ರತಿನಿಧಿಗಳು ಈ ರಸ್ತೆಯಲ್ಲೇ ಓಡಾಡುತ್ತಿದ್ದು ಯಾವುದೇ ಸಂಬಂಧವಿಲ್ಲದಂತೆ ಇರುವುದು ಬೇಸರದ ಸಂಗತಿ ಎಂದು ಸಾರ್ವಜನಿಕರು, ಅಂಗಡಿ ಮುಂಗಟ್ಟಿನ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ, ಮುಂದಿನ ದಿನಗಳಲ್ಲಾದರೂ ರಸ್ತೆಗಳ ಗುಂಡಿ ಮುಚ್ಚಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡುತ್ತಾರಾ..? ಕಾದು ನೋಡೋಣ..!

ಇತ್ತೀಚಿನ ಸುದ್ದಿ

ಜಾಹೀರಾತು