8:17 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಣ್ಣನೆ

01/02/2025, 18:11

*ಬಡ ಮತ್ತು ಮದ್ಯಮ ವರ್ಗವವರ ಪ್ರಗತಿಗೆ ಪೂರಕವಾಗಿದೆ*

*ಕಿಸಾನ್ ಕ್ರೆಡಿಟ್ ಸಾಲ ಹೆಚ್ಚಿಸಿ ಅನ್ನದಾತರಿಗೆ ಆಶಾದಾಯಕವಾಗಿದೆ*

*ಮಾರಣಾಂತಿಕ ಕ್ಯಾನ್ಸರ್ ರೋಗಿಗಳ ಪಾಲಿಗೆ ಸಂಜೀವಿನಿ*

ನವದೆಹಲಿ(reporterkarnataka.com): ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟವಾಗುವ ಧ್ಯೇಯಕ್ಕೆ ಅತ್ಯಂತ ಸ್ಫೂರ್ತಿದಾಯಕ ಬಜೆಟ್ ಇದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು.
ದೆಹಲಿಯಲ್ಲಿ ಇಂದು ಪ್ರಸಕ್ತ ಬಜೆಟ್ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ದೇಶದ ಆರ್ಥಿಕ ಪ್ರಗತಿಯ ಮುನ್ನೋಟಕ್ಕೆ ಆಶಾದಾಯಕ ಬಜೆಟ್ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಬಡ ಮತ್ತು ಮಧ್ಯಮ ವರ್ಗಗಳವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೂರಕವಾಗಿ ಪ್ರಸಕ್ತ ಸಾಲಿನ ಮುಂಗಡ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ ಎಂದು ಜೋಶಿ ಹೇಳಿದರು.


ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ, ನಾಯಕತ್ವ ಮತ್ತು ದೂರದೃಷ್ಟಿಯಿಂದಾಗಿ ಭಾರತ ಆರ್ಥಿಕವಾಗಿ ಬಹು ವೇಗದಲ್ಲಿ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.
ಎನ್ ಡಿಎ ಸರ್ಕಾರ, ತನ್ನ ಮೂರನೇ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗಗಳವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿರಿಸಿ ಅಭೂತಪೂರ್ವ ಬಜೆಟ್ ಅನ್ನು ಪ್ರಸ್ತುತಪಡಿಸಿದೆ ಎಂದರು.
ಕೇಂದ್ರದ ಈ ಬಜೆಟ್ ಸಮೃದ್ಧ, ಸ್ವಾವಲಂಬಿ ಮತ್ತು ಜಾಗತಿಕವಾಗಿ ಮುನ್ನಡೆ ಸಾಧಿಸುತ್ತಿರುವ ಭಾರತಕ್ಕೆ ಮತ್ತಷ್ಟು ಸುಭದ್ರ ಅಡಿಪಾಯ ಹಾಕಿದೆ. ಆರ್ಥಿಕತೆ ಮತ್ತು ಹೂಡಿಕೆಯಲ್ಲಿ ಗಣನೀಯ ಪ್ರಗತಿಗೆ ದಿಕ್ಸೂಚಿಯಂತಿದೆ ಎಂದರು.
*ಜನರ ನಿರೀಕ್ಷೆ ಮೀರಿದ ಆಶಾದಾಯಕ ಬಜೆಟ್:* 2024-25ನೇ ಆರ್ಥಿಕ ವರ್ಷದ ಪ್ರಸಕ್ತ ಬಜೆಟ್ ನಲ್ಲಿ ಮಧ್ಯಮ ವರ್ಗ, ಉದ್ಯಮ, ಕೃಷಿ, ಮೆಡಿಕಲ್ ಹೀಗೆ ಸರ್ವ ಕ್ಷೇತ್ರಕ್ಕೂ ಬಂಪರ್ ಕೊಡುಗೆ ನೀಡಲಾಗಿದೆ. ಇದೊಂದು ಜನರ ನಿರೀಕ್ಷೆಯನ್ನೂ ಮೀರಿದ ಅಭೂತಪೂರ್ವ ಬಜೆಟ್ ಆಗಿದೆ ಎಂದು ನುಡಿದರು.
ಪ್ರಮುಖವಾಗಿ 12 ಲಕ್ಷ ರೂಪಾಯಿವರೆಗೆ ಆದಾಯ ತೆರಿಗೆ ವಿನಾಯಿತಿ ಕಲ್ಪಿಸುವ ಮೂಲಕ ಮಧ್ಯಮ ವರ್ಗಕ್ಕೆ ಬಿಗ್ ಗಿಫ್ಟ್ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಿ ರೈತ ವರ್ಗಕ್ಕೆ ಆಶಾದಾಯಕವಾಗಿದೆ.
ಇನ್ನು, ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ತೆರೆಯಲು ನಿರ್ಧರಿಸಿ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದೆ ಎಂದರು.

ಐಐಟಿ, ಮೆಡಿಕಲ್, ಆರೋಗ್ಯ, ಸಣ್ಣ ಉದ್ಯಮ ಹೀಗೆ ಸರ್ವ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಸ್ಫೂರ್ತಿದಾಯಕ ಬಜೆಟ್ ಆಗಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದರು.
*ನವೀಕರಿಸಬಹುದಾದ ಇಂಧನಕ್ಕೆ ಉತ್ತೇಜನ:*
ಹೊಸ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಗಮನಾರ್ಹ ಉತ್ತೇಜನ ನೀಡಿದೆ. ಕೇಂದ್ರದಲ್ಲಿ ಯುಪಿಎ ಸರ್ಕಾರದ ಅವಧಿಯ ಬಜೆಟ್‌ನಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಶಕ್ತಿಯ ಉತ್ಪಾದನೆಗೆ ಸಾಧಾರಣ ಸಂಪನ್ಮೂಲಗಳನ್ನು ಮೀಸಲಿಡಲಾಗುತ್ತಿತ್ತು. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ NDA ಸರ್ಕಾರ ತನ್ನ ನಿಧಿಯನ್ನು ಗಮನಾರ್ಹವಾಗಿ ವಿಸ್ತರಿಸಿದೆ ಎಂದರು.
ಒಟ್ಟಾರೆ ದೇಶದ ಸುಸ್ಥಿರತೆ, ಬೆಳವಣಿಗೆ ಮತ್ತು ಸಮೃದ್ಧಿಯೆಡೆಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಸಚಿವರು ಪ್ರತಿಪಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು