ಇತ್ತೀಚಿನ ಸುದ್ದಿ
‘ಸಾಲದ ಬಜೆಟ್’: ಕೇಂದ್ರ ಮುಂಗಡ ಪತ್ರ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪ್ರತಿಕ್ರಿಯೆ
01/02/2025, 20:08
ಮಂಗಳೂರು(reporterkarnataka.com): ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವುದು “ಸಾಲದ ಬಜೆಟ್ ” ಆಗಿದೆ. ಬಡವರಿಗೆ, ಮಧ್ಯಮ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಪೂರಕವಾದ ಒಂದೇ ಒಂದು ಯೋಜನೆ ಆಯವ್ಯಯದಲ್ಲಿ ಇಲ್ಲ ಎಂದು
ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರದ “ಸಬ್ ಕಾ ಸಾಥ್, ಸಬ್ ಕಾ ವಿಕಾಸ್” ಬಜೆಟ್ ನಲ್ಲಿ ಎಲ್ಲೂ ಪ್ರತಿಫಲಿಸಿಲ್ಲ. ಅದು ಕೇವಲ ಘೋಷಣೆಯಾಗೇ ಉಳಿದಿದೆ. ದೆಹಲಿ, ಬಿಹಾರ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಮಂಡಿಸಿದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ವಿರೋಧ ಪಕ್ಷಗಳ ಸರ್ಕಾರ ಇರುವ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ. ಅನ್ಯಾಯವಾಗಿದೆ. ಇದನ್ನು ವಿತ್ತ ಸಚಿವರು ಹಾಗೂ ಪ್ರಧಾನ ಮಂತ್ರಿಗಳು ಪುನರ್ ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದ್ದಾರೆ.