12:53 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮೋದಿ ಸರ್ಕಾರದ ಸರ್ವಸ್ಪರ್ಶಿ ಬಜೆಟ್: ಶಾಸಕ ವೇದವ್ಯಾಸ ಕಾಮತ್ ಶ್ಲಾಘನೆ

01/02/2025, 20:18

ಮಂಗಳೂರು(reporterkarnataka.com): ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ದಾಖಲೆಯ ಎಂಟನೇ ಬಾರಿಯ 2025-26 ನೇ ಸಾಲಿನ ವಿಕಸಿತ ಬಜೆಟ್‌ ನವ ಭಾರತಕ್ಕೆ ಹೊಸ ಶಕ್ತಿಯನ್ನು ತುಂಬುವುದರ ಜೊತೆಗೆ ರಾಷ್ಟ್ರವು ಜಾಗತಿಕ ಮಟ್ಟದಲ್ಲಿ ಸದೃಢವಾಗಿ ಬೆಳೆಯುತ್ತಿರುವುದರ ಸಂಕೇತವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಬಜೆಟ್ ನಲ್ಲಿ ತೆರಿಗೆದಾರರಿಗೆ 12 ಲಕ್ಷದವರೆಗಿನ ಆದಾಯ ತೆರಿಗೆ ರದ್ದುಪಡಿಸಿರುವುದು ಅತ್ಯಂತ ದೊಡ್ಡ ನಿರ್ಧಾರವಾಗಿದ್ದು, ಕ್ಯಾನ್ಸರ್‌ ಔಷಧ, ಎಲೆಕ್ಟ್ರಿಕ್‌ ವಾಹನಗಳು, ಮೊಬೈಲ್‌ ಫೋನ್, ಎಲ್‌ಇಡಿ ಟಿವಿ, ಚರ್ಮದ ಉತ್ಪನ್ನಗಳು, ಸ್ವದೇಶಿ ಬಟ್ಟೆಗಳು ಹೀಗೆ ಹತ್ತು ಹಲವು ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದ್ದು ಬಡ ಹಾಗೂ ಮಧ್ಯಮ ವರ್ಗದ ಹರ್ಷಕ್ಕೆ ಕಾರಣವಾಗಿದೆ. ಸಣ್ಣ, ಮಧ್ಯಮ ಉದ್ದಿಮೆದಾರರಿಗೆ 20 ಕೋಟಿವರೆಗೆ ಸಾಲ, ಎಸ್ಸಿ ಎಸ್ಟಿ ಮಹಿಳಾ ಉದ್ದಿಮೆದಾರರಿಗೆ 2 ಕೋಟಿವರೆಗೆ ವಿಶೇಷ ಸಾಲ, ಬೀದಿಬದಿ ವ್ಯಾಪಾರಿಗಳಿಗೆ ಸಾಲ, ಕೃಷಿಕರಿಗೆ-ಮಹಿಳೆಯರಿಗೆ-ಯುವಕರಿಗೆ- ಹಿರಿಯರಿಗೆ ವಿಶೇಷ ಆದ್ಯತೆ ಹೀಗೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷವಾಗಿ ಗಮನ ಹರಿಸಲಾಗಿರುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದಿದ್ದಾರೆ.
ಎಂದಿನಂತೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಹತಾಶೆಯಲ್ಲಿ ಅನಗತ್ಯ ಟೀಕೆ ಮಾಡುತ್ತಿದ್ದರೂ ದೇಶದ ಜನತೆ ಅದಕ್ಕೆಲ್ಲ ಹೆಚ್ಚಿನ ಪ್ರಾಶಸ್ತ್ಯ ನೀಡದೇ ಈ ಬಾರಿಯ ಕೇಂದ್ರದ ಬಜೆಟ್ ನಿಂದ ಸಂತಸಗೊಂಡಿರುವುದು ಗಮನಾರ್ಹ ಸಂಗತಿ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು