8:22 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕುಂಭಮೇಳ ಕಾಲ್ತುಳಿತದಲ್ಲಿ ಚಿತ್ರದುರ್ಗದ ಯಾರೂ ಮೃತಪಟ್ಟಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

01/02/2025, 22:53

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದು, ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ವಾಸ್ತವವಾಗಿ ಆ ವ್ಯಕ್ತಿಯು ಪ್ರಯಾಗ್ ರಾಜ್ ನಿಂದ ಸುಮಾರು 500 ಕಿಮೀ ದೂರದ ಲ್ಲಿರುವ ಝಾನ್ಸಿಯ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಶವವಾಗಿ ಪತ್ತೆಯಾಗಿದ್ದು, ಈ ವಿಷಯವನ್ನು ಅಲ್ಲಿನ ರೈಲ್ವೆ ನಿಲ್ದಾಣದ ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಲಾಗಿರುತ್ತದೆ.
ಈ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಳ್ಳಲಾಗಿದೆ. ಹೀಗಾಗಿ ಝಾನ್ಸಿ ರೈಲ್ವೆ ನಿಲ್ದಾಣ ದಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವನ್ನು ಇಲ್ಲಿನ ಆಸ್ಪತ್ರೆ ಯ ಶವಾಗಾರದಲ್ಲಿ ಇರಿಸಲಾಗಿದ್ದು, ಯಾರಾದರೂ ವಾರಸುದಾರರಿದ್ದಲ್ಲಿ, ಶವ ಗುರುತಿಸಿ, ಪತ್ತೆ ಮಾಡಿಕೊಳ್ಳಬಹುದಾಗಿದೆ.
ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು