8:58 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ ಕಾಟ ಬಗ್ಗೆ ಹೇಳಿದ್ದೇನು?

03/02/2025, 16:59

ಮಂಗಳೂರು(reporterkarnataka.com): ಈಗ ನಾನಿರುವ ಪೋಸ್ಟ್‌ನಲ್ಲಿ ಸಂತೋಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೇ ಇದ್ರೂ ಸಂತೋಷದಲ್ಲಿ ಇರುತ್ತೇನೆ. ಈಗ ನಾನು ಸ್ಪೀಕರ್ ನನಗೆ ನಾನೇ ಕಮಾಂಡರ್ ಎಂದು ವಿಧಾನ ಸಭೆ ಸ್ಪೀಕರ್ ಯು .ಟಿ.ಖಾದರ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇತ್ತೀಚೆಗೆ ನರಿಂಗಾನದಲ್ಲಿ ನಡೆದ ಕಂಬಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯು.ಟಿ.ಖಾದರ್‌ ಅವರಿಗೆ ಸ್ಪೀಕರ್ ಆಗೋದು ಇಷ್ಟವಿರಲಿಲ್ಲ ಎಂಬ ಹೇಳಿಕೆಯ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಖಾದರ್, ನಾನೀಗ ಸರ್ಕಾರದಲ್ಲಿ ಇಲ್ಲ, ನನಗೆ ಏನು ನಡೆಯುತ್ತಿದೆ ಎಂದು ಗೊತ್ತಾಗಿಲ್ಲ ಎಂದರು.
ವಿಧಾನಸೌಧದಲ್ಲಿ ಶ್ವಾನಗಳ ಕಾಟಕ್ಕೆ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿದರು.
ಸದ್ಯ ವಿಧಾನಸೌಧದಲ್ಲಿ ಶ್ವಾನಗಳ ಕಾಟ ಹೆಚ್ಚಾಗಿದ್ದು, ಒಮ್ಮೆಗೆ ವಿಧಾನಸೌಧದಿಂದ ಶಾಸಕರನ್ನಾದರೂ ಹೊರಹಾಕಬಹುದು, ಆದರೆ ಶ್ವಾನಗಳನ್ನು ಹೊರಹಾಕೋದೇ ಹೇಗೆ ಎಂದು ಸಮಸ್ಯೆಯಾಗಿದೆ. ಶ್ವಾನಗಳ ಪರವಿದ್ದವರು ಇದ್ದಾರೆ, ವಿರೋಧ ಇದ್ದವರು ಇದ್ದಾರೆ. ಆದ್ದರಿಂದ‌ ಶ್ವಾನಗಳನ್ನು ಹೊರ ಹಾಕೋದಕ್ಕೆ ಸಭೆ ಕರೆದಿದ್ದೇನೆ. ಈ ಸಭೆಗೆ ಪ್ರಾಣಿ ದಯಾ ಸಂಘದವರನ್ನು ಕರೆಯುತ್ತೇವೆ ಎಂದು ಖಾದರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು