10:42 PM Tuesday4 - February 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರಕಾರದಿಂದ ರಾಜ್ಯ ಸೂತಕದ ಮನೆಯಾಗಿದೆ: ಹಾಸನದಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ… ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ DUO ಬ್ಲಾಕ್ ವಾಟರ್ ಸಾಫ್ಟನರ್: ಯುರಾಕ್ವಾ ಜತೆ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್ ಪಾಲುದಾರಿಕೆ ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ… ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ;… ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ… ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಪಿಜಿ ವಿದ್ಯಾರ್ಥಿನಿ ನೇಣಿಗೆ ಶರಣು

03/02/2025, 22:33

ಬೆಂಗಳೂರು(reporterkarnataka.com): ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು
ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಮೈಸೂರು ಜಿಲ್ಲೆಯವರಾದ ಬೆಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್. ಪಾವನ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿನಿ ಪಾವನ ಅವರು ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯರು ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಪಾವನ ಅವರು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾಗಿದ್ದಾರೆ. ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಡೆತ್​ನೋಟ್​​ ಬರೆದಿಟ್ಟು ಪಾವನ
ಸಾವಿಗೆ ಶರಣಾಗಿದ್ದಾರೆ.
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಪೋಷಕರು ಬೆಂಗಳೂರಿಗೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು