12:10 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌: ಫೆ. 8 ಮತ್ತು 9ರಂದು ಕೊರ್ಡೆಲ್‌ ಖೇಳ್-ಮೇಳ್

03/02/2025, 22:41

ಮಂಗಳೂರು(reporterkarnataka.com): ನಗರದ ಕಲಶೇಖರದ ಕೊರ್ಡೆಲ್ ಪವಿತ್ರ ಶಿಲುಬೆ ಚರ್ಚ್‌ನಲ್ಲಿ ಫೆ. 8 ಮತ್ತು 9ರಂದು ಕೊರ್ಡೆಲ್‌ಖೇಳ್-ಮೇಳ್ ಆಯೋಜಿಸಲಾಗಿದೆ ಎಂದು ಚರ್ಚ್‌ನ ಪ್ರಧಾನ ಧರ್ಮಗುರು ವಂ| ಕ್ಲಿಫರ್ಡ್ ಫೆರ್ನಾಂಡಿಸ್ ಹೇಳಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿವಿಧ ರೀತಿಯ ಆಹಾರ ಮಳಿಗೆಗಳು, ಮನೋರಂಜನಾ ಆಟಗಳ ಸ್ಟಾಲ್‌ಗಳು ಒಳಗೊಂಡಿವೆ ಎಂದರು.
ಫೆ. 8ರಂದು ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯ್ಲಿ, ಕಿಶೋರ್ ಕೊಟ್ಟಾರಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ 20 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಕಾರ್ಯಕ್ರಮದ ಸಂಯೋಜಕ ರೋಯ್ ಕ್ಯಾಸ್ತೆಲಿನೋ, ಚರ್ಚ್‌ನ ಪಾಲನಾ ಸಮಿತಿ ಉಪಾಧ್ಯಕ್ಷೆ ರೂತ್ ಕ್ಯಾಸ್ತೆಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಮಾಧ್ಯಮ ಸಂಯೋಜಕ ಎಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು