6:20 PM Wednesday5 - February 2025
ಬ್ರೇಕಿಂಗ್ ನ್ಯೂಸ್
ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ; ಆನೆ ಹಾವಳಿ ತಡೆಯುವಲ್ಲಿ ಕೆ.ಪಿ. ಟ್ರ್ಯಾಕರ್… ಕಾಂಗ್ರೆಸ್ ಸರಕಾರದಿಂದ ರಾಜ್ಯ ಸೂತಕದ ಮನೆಯಾಗಿದೆ: ಹಾಸನದಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ… ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ DUO ಬ್ಲಾಕ್ ವಾಟರ್ ಸಾಫ್ಟನರ್: ಯುರಾಕ್ವಾ ಜತೆ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್ ಪಾಲುದಾರಿಕೆ ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ… ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ;… ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ…

ಇತ್ತೀಚಿನ ಸುದ್ದಿ

ನಂಜನಗೂಡು: ವಿಚಿತ್ರ ರೂಪದ ಮಗು ಜನನ; ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ

05/02/2025, 17:17

*ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ ಆತಂಕದಲ್ಲಿ ಕುಟುಂಬ...*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಅಪರೂಪದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.
ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ. ವಿಚಿತ್ರವಾದ ಕಣ್ಣು ಮತ್ತು ತುಟಿ, ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ವಿಚಿತ್ರ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.
ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.
ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ. ಮಗುವನ್ನು ಉಳಿಸಿಕೊಳ್ಳಲು ಹುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷವಷ್ಟೇ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿದ್ದರು ಎಂದು ತಿಳಿದು ಬಂದಿದ್ದು ನಾಲ್ಕೈದು ದಿನಗಳ ನಂತರ ಸಾವನ್ನಪ್ಪಿತ್ತು ಎನ್ನಲಾಗಿದೆ. ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.
ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದ್ದು ಮಗುವನ್ನ ಉಳಿಸಿಕೊಳ್ಳಲು ಚೆಲುವಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿರಿಸಿ ಹರಸಾಹಸ ನಡೆಸಲಾಗುತ್ತಿದೆ.
ಇಂತಹ ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಸವಾಲು ಎನ್ನುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು