5:34 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಸಚಿವ ಪಿಯೂಷ್ ಗೆ ಆಹ್ವಾನ

05/02/2025, 21:12

ನವದೆಹಲಿ(reporterkarnataka.com): ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು..

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಆಮಂತ್ರಣ ನೀಡಿದ್ದಾರೆ.
ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ ನೂತನ‌ ಕೈಗಾರಿಕಾ ನೀತಿ ಹಾಗೂ ಸ್ವಚ್ಛ ಇಂಧನ‌ ನೀತಿಯ ಬಗ್ಗೆ ನಿರ್ಮಲಾ ಸೀತಾರಾಮನ್ ಅವರಿಗೆ ಮಾಹಿತಿ ನೀಡಿದರು.
ಬಳಿಕ ಪಾಟೀಲ್ ಅವರು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಮತ್ತು ಎಐಸಿಸಿ ಉಸ್ತುವಾರಿ, ಸಂಸದ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ, ಆಹ್ವಾನ ಪತ್ರಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು