11:10 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶ: ಗ್ರೀಸ್ ಮಾಜಿ ಪ್ರಧಾನಿ ಪಪಾಂಡ್ರಿಯೂ, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಈ ಬಾರಿಯ ಆಕರ್ಷಣೆ

06/02/2025, 09:27

ಬೆಂಗಳೂರು(reporterkarnataka.com): ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ 75 ಸಾಧಕ ಉದ್ಯಮಿಗಳು ಮಾತನಾಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕುಮಾರಮಂಗಲಂ‌ ಬಿರ್ಲಾ, ಜಿಂದಾಲ್ ಸ್ಟೀಲ್ ವರ್ಕ್ಸ್ ವ್ಯವಸ್ಥಾಪಕ‌ ನಿರ್ದೇಶಕ ಸಜ್ಜನ್ ಜಿಂದಾಲ್, ಆಯುಷ್ಮಾನ್ ಭಾರತ ಯೋಜನೆಯ ಮಾಜಿ‌ ಸಿಇಒ ಇಂದುಭೂಷಣ್, ಸಿನಿಮಾ ನಿರ್ಮಾಪಕಿ‌ ಕಿರಣ್ ರಾವ್, ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್, ಏಕಸ್ ಸಿಇಒ ಅರವಿಂದ್ ಮೆಳ್ಳಿಗೇರಿ, ಅಮೆರಿಕದ ಇಂಧನ‌ ಇಲಾಖೆಯ ಸಿಐಒ ಆ್ಯನ್ ಡಂಕಿನ್, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ, ಕಿರ್ಲೋಸ್ಕರ್ ಸಮೂಹದ ಎಂಡಿ ಗೀತಾಂಜಲಿ‌ ಕಿರ್ಲೋಸ್ಕರ್ ಕೂಡ ಸಮಾವೇಶದಲ್ಲಿ ವಿವಿಧ ಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದಿದ್ದಾರೆ.
ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಒಟ್ಟಾರೆಯಾಗಿ 30ಕ್ಕೂ ಹೆಚ್ಚು ಚಿಂತನಾ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಸಣ್ಣ ಮತ್ತು ಮಧ್ಯಮ ಸ್ತರದ ಕೈಗಾರಿಕೆಗಳು ಹಾಗೂ ನವೋದ್ಯಮಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ಭವಿಷ್ಯದ ತಂತ್ರಜ್ಞಾನ, ಆರ್ಥಿಕತೆ ಮತ್ತು ಕೈಗಾರಿಕಾ ಉದ್ಯಮ ಕುರಿತು ಸಮಾವೇಶದಲ್ಲಿ ಮೂರು ದಿನಗಳ ಕಾಲ ಚರ್ಚಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.
ಸಮಾವೇಶದ ಮೂಲಕ 10 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಪೈಕಿ ಶೇಕಡಾ 80ರಷ್ಟಾದರೂ ನೈಜ ಹೂಡಿಕೆಯಾಗಿ ಬರಬೇಕು ಎನ್ನುವುದು ನಮ್ಮ ಪ್ರಯತ್ನವಾಗಿದೆ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು