4:04 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾಗಿ ಜಯಾನಂದ ಪೆರಾಜೆ

06/02/2025, 14:48

ಬಂಟ್ವಾಳ(reporterkarnataka.com): ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಹಿರಿಯ ಪತ್ರಕರ್ತ ಸಾಹಿತಿ ಜಯಾನಂದ ಪೆರಾಜೆ ಆಯ್ಕೆಯಾಗಿದ್ದು, ಪದಗ್ರಹಣ ನೆರವೇರಿತು.
ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ಸ್ಥಾಪಕ ಸಂಚಾಲಕ ಡಾ.ವಾಮನ ರಾವ್ ಬೇಕಲ್ ಅಧ್ಯಕ್ಷತೆಯಲ್ಲಿ ಪದಗ್ರಹಣ ಸಮಾರಂಭ ಭಾನುವಾರ ನೆರವೇರಿತು. ರಾಜ್ಯ ಮಹಿಳಾ ಸಂಚಾಲಕಿಯಾಗಿ ಡಾ. ಶಾಂತ ಪುತ್ತೂರು, ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ಕವಿ ವಿರಾಜ್ ಅಡೂರು , ಗೌರವ ಅಧ್ಯಕ್ಷರಾಗಿ ಶಿಕ್ಷಣ ತಜ್ಞ ವಿ.ಬಿ ಕುಳಮರ್ವ, ಕೋಶಾಧಿಕಾರಿಯಾಗಿ ಸಂಧ್ಯಾರಾಣಿ ಬೇಕಲ್ ಅಧಿಕಾರ ಸ್ವೀಕರಿಸಿದರು. ವಿವಿಧ ಪದಾಧಿಕಾರಿಗಳನ್ನು ಘೋಷಿಸಲಾಯಿತು.
ಕೇಂದ್ರದ ಪ್ರಧಾನ ಸಮಿತಿ ಕ಼ಚೇರಿ ಮುಳ್ಳಿಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ಅವರು ಕನ್ನಡ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿ ಕನ್ನಡ ಭಾಷೆ ಸಂಸ್ಕೃತಿ ಉಳಿಸಲು ವಿವಿಧ ಕನ್ನಡ ಸಂಘಟನೆಗಳು ಕೈಜೋಡಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೊ. ಪಿ.ಎನ್. ಮೂಡಿತ್ತಾಯ , ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡರಾದ ಡಾ. ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು , ಕವಯಿತ್ರಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೊ. ಎ. ಶ್ರೀನಾಥ್ , ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಶುಭ ಹಾರೈಸಿದರು.
ಡಾ.ವಾಮನ ರಾವ್ ಬೇಕಲ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಪರಿಷತ್ತಿನ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು. ಚುಟುಕು ಸಾಹಿತಿ ವಿರಾಜ್ ಅಡೂರು ಅಧ್ಯಕ್ಷತೆಯಲ್ಲಿ ಅಂತಾರಾಜ್ಯ ಮಟ್ಟದ ಚುಟುಕು ಕವಿ ಗೋಷ್ಠಿ ನಡೆಯಿತು. ಕ.ಸಾ.ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು. ನರಸಿಂಹ ಭಟ್ ಏತಡ್ಕ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು