2:01 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜನನ-ಮರಣ ಪ್ರಮಾಣ ಪತ್ರ ಶುಲ್ಕ 10 ಪಟ್ಟು ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ

06/02/2025, 20:20

ನವದೆಹಲಿ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರಕ್ಕೂ ಹತ್ತುಪಟ್ಟು ಶುಲ್ಕ ಹೆಚ್ಚಿಸಿ ಜನರನ್ನು ಲೂಟಿ ಮಾಡುವ ತನ್ನ ನಿಜ ಸ್ವರೂಪ ತೋರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರದ ಕ್ರಮದ ವಿರುದ್ಧ ತಮ್ಮ X ಖಾತೆಯಲ್ಲಿ ತೀವ್ರವಾಗಿ ಖಂಡಿಸಿರುವ ಸಚಿವರು, ಕಾಂಗ್ರೆಸ್ ಸರ್ಕಾರದ ಬೆಲೆ ಹೆಚ್ಚಳ ಪಟ್ಟಿಯಲ್ಲಿ ಇದೊಂದು ಬಾಕಿ ಇತ್ತೇನೋ? ಎಂದು ಹರಿ ಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನು 5 ರಿಂದ 50 ರೂಪಾಯಿಗೆ ಹೆಚ್ಚಿಸಿ ಶ್ರೀಸಾಮಾನ್ಯರು ಹುಟ್ಟು – ಸಾವಿಗೂ ದಂಡ ತೆರುವಂತೆ ಮಾಡಿದೆ ಎಂದು ಜೋಶಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ನೀರಿನ ಕರ, ನಂದಿನಿ ಹಾಲು, ಪಹಣಿ ಶುಲ್ಕ, ಪೆಟ್ರೋಲ್, ಡಿಸೇಲ್, ಅಬಕಾರಿ ಸುಂಕ, ವಿದ್ಯುತ್ ಬಿಲ್ ಹೀಗೆ ಜನಸಾಮಾನ್ಯರ ಅಗತ್ಯತೆಗಳ ಬೆಲೆ ಏರಿಸಿ ಬರೆ ಎಳೆದಿದೆ. ಈಗ ಜನನ-ಮರಣ ಪ್ರಮಾಣ ಪತ್ರದ ಶುಲ್ಕವೂ ಸಾಲದಾಯಿತೇ? ಎಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.10ರಷ್ಟು ತೆರಿಗೆ ಹಂಚಿಕೆ ಪಾಲು ಅಧಿಕಗೊಳಿಸಿ ಅನುದಾನ ಒದಗಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರದ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು