11:26 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಸೂಚನೆ

06/02/2025, 20:35

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ‌ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.
ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೀಜೋತ್ಪಾದನೆ, ಗುರಿ ಸಾಧನೆಗೆ ಜೊತೆಗೆ ಸುಧಾರಿತ ಸೇವಾ ಸೌಲಭ್ಯವನ್ನು ಒದಗಿಸಿ ಎಂದು ನಿರ್ದೇಶನ ನೀಡಿದರು.
ಕೃಷಿ ಅಭ್ಯುದಯದ ಆಶಯದೊಂದಿಗೆ ರಚನೆಗೊಂಡಿರುವ ಕರ್ನಾಟಕ ರಾಜ್ಯ ಬೀಜ ನಿಗಮವು ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಪರಿಣಾಮಕಾರಿ ಪರಿವರ್ತನೆಗಳೊಂದಿಗೆ ರೈತರಿಗೆ ಇನ್ನಷ್ಟು ಗುಣಾತ್ಮಕ ಸೇವೆ ಒದಗಿಸಬೇಕು ಎಂದರು.
ನಿಗಮದಿಂದ ರೈತರಿಗೆ ಹಾಗೂ ಷೇರುದಾರರಿಗೆ 4.30 ಕೋಟಿ ರೂ ಲಾಭಂಶ ವಿತರಣೆ ಮಾಡಿರುವುದು ಅಭಿನಂದನೀಯ ಎಂದು ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ನಿಗಮವು 2024-25ನೇ ಸಾಲಿನಲ್ಲಿ 4.30 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಹೊಂದಿದ್ದು, ಈ ತನಕ 0.75 ಲಕ್ಷ ಕ್ವಿಂಟಾಲ್ ದಾಸ್ತಾನು ಸ್ವೀಕರಿಸಲಾಗಿದೆ. ಉಳಿಕೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಹೇಳಿದರು.
ರಸಗೊಬ್ಬರ ಕಾಪು ದಾಸ್ತಾನು ಯೋಜನೆಯಡಿ 2024-25ನೇ ಸಾಲಿನಲ್ಲಿ 1.18 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪಡೆದು 1.10 ಲಕ್ಷ ಮೆಟ್ರಿಕ್ ಟನ್ ವಿತರಿಸಿದ್ದು, ಬಾಕಿ 0.8 ಲಕ್ಷ ಮೆಟ್ರಿಕ್ ಟನ್ ಆದಷ್ಟು ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದರು.
ICRISAT ಹೈದರಾಬಾದ್‌ನೊಂದಿಗೆ ಹೊಸತಳಿ ಅಳವಡಿಕೆ ಬಗ್ಗೆ MoU ಮಾಡಿಕೊಂಡಿದ್ದು, ಇದುವರೆಗಿನ ಪ್ರಗತಿ ಏನು? ಯಾವ ತಳಿ ಅಳವಡಿಸಲಾಗಿದೆ? ರೈತರಿಗೆ ಆಗಿರುವ ಪ್ರಯೋಜನವೇನು? ಎಂಬ ಬಗ್ಗೆ ಮಾಹಿತಿ ಪಡೆದ ಸಚಿವರು ನಿಗಮದ ಕಾರ್ಯ ಚಟುವಟಿಕೆಗಳು ರೈತರ ಹೊಲಗಳಲ್ಲಿ ರಚನಾತ್ಮಕ ಪರಿಣಾಮ ಬೀರುವುದನ್ನು ಖಾತರಿ ಪಡಿಸಿಕೊಳ್ಳುವಂತೆ ನರ್ದೇಶನ ನೀಡಿದರು.
N.F.S.M ಯೋಜನೆಯಡಿ 2023-24 ಮತ್ತು 2024-25ನೇ ಸಾಲಿನಲ್ಲಿ ಉತ್ಪಾದಿಸಿದ ನ್ಯೂಟ್ರಿಸಿರಿಯಲ್ಸ್ ಮತ್ತು ದ್ವೀದಳ ಧಾನ್ಯ ಪ್ರಮಾಣಿತ ಬೀಜಗಳಿಗೆ ಒಟ್ಟಾರೆ ರೂ.10.38 ಕೋಟಿ ಪ್ರೋತ್ಸಾಹಧನ ಪಡೆಯಲಾಗಿದ್ದು,
ಆದಷ್ಟು ಬೇಗ ಪೂರ್ಣಗೊಳಿಸುವಂತೆ ತಿಳಿಸಿದರು.
2025-26ನೇ ಸಾಲಿನಲ್ಲಿ ರೈತರಿಗೆ ನಿಯಮಿತವಾಗಿ ಬಿತ್ತನೆ ಬೀಜ ಪೂರೈಸುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಇದೇ ವೇಳೆ ಕೃಷಿ ಇಲಾಖೆ ಕಾರ್ಯದರ್ಶಿ ಡಾ.ರವಿಶಂಕರ್, ಆಯುಕ್ತ ವೈ‌.ಎಸ್.ಪಾಟೀಲ್, ಕರ್ನಾಟಕ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ದೇವರಾಜ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು ‌.
#@agriculturalministerofkarnataka#agriculturalministercheluvarayaswamy#karnatakaagriculturaldepartment#karnatakagovt#karnatakacm

ಇತ್ತೀಚಿನ ಸುದ್ದಿ

ಜಾಹೀರಾತು