5:44 PM Wednesday25 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ – ಮಗನ ಕುಟುಂಬಕ್ಕೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಭೇಟಿ

06/02/2025, 22:31

*ಪೊಲೀಸರು ಕೂಡ ಮೈಕ್ರೋ ಫೈನಾನ್ಸ್‌ಗೆ ಬೆಂಬಲ ನೀಡಿದ್ದಾರೆ*

ಮಂಡ್ಯ(reporterkarnataka.com): ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.
ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.

ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ. ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್‌ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ 12% ರಂತೆ ಸಾಲ ನೀಡಿವೆ. ಒಬ್ಬರಿಗೆ ಒಂಬತ್ತು ಜನರು ಶೂರಿಟಿ ನೀಡಿದ್ದಾರೆ. ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. *ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್‌ಗೆ* ಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಮಂಡ್ಯದಲ್ಲಿ 60 ಮೈಕ್ರೋ ಫೈನಾನ್ಸ್‌ಗಳಿದ್ದು, ಕೇವಲ 18 ಮಾತ್ರ ಅಧಿಕೃತವಾಗಿವೆ. ಉಳಿದವುಗಳಲ್ಲಿ ರೌಡಿಗಳಿದ್ದಾರೆ. ತಹಶೀಲ್ದಾರ್‌ ಹಾಗೂ ಪೊಲೀಸರು ಎಲ್ಲ ಹಳ್ಳಿಗೂ ಹೋಗಿ ಕ್ರಮ ಕೈಗೊಳ್ಳಬೇಕಿತ್ತು. ಈ ಸಾವುಗಳಿಗೆ ನ್ಯಾಯ ನೀಡಲು ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು. ಅನಧಿಕೃತ ಮೈಕ್ರೋ ಫೈನಾನ್ಸ್‌ಗಳನ್ನು ಪತ್ತೆ ಮಾಡಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು