4:50 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹೀಂ ನವಾಝ್ ಆಯ್ಕೆ

08/02/2025, 21:24

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 10942 ಮತಗಳನ್ನು ಗಳಿಸಿ ಇಬ್ರಾಹೀಂ ನವಾಝ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬಡಕಬೈಲ್ ನಿವಾಸಿಯಾಗಿರುವ ಇಬ್ರಾಹೀಂ ನವಾಝ್ ಈ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರಿಯಂಗಳ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಅವರು ಬಂಟ್ವಾಳ ಹ್ಯೂಮನ್ ವೆಲ್ಫೇರ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾಗಿ, ಆಸರೆ ಸೇವಾ ಫೌಂಡೇಶನ್ ಕಾರ್ಯದರ್ಶಿ, ನವೋದಯ ಅಟೋ-ರಿಕ್ಷಾ ಚಾಲಕ-ಮಾಲಕರ ಸಂಘ ಗೌರವಧ್ಯಕ್ಷರಾಗಿ, ಬಂಟ್ವಾಳ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಸದಸ್ಯ, ತೆಂಗು ಬೆಳೆಗಾರರ ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳಿಗೆ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ 2024ರ ಆಗಸ್ಟ್ ತಿಂಗಳಿನಲ್ಲಿ ಮತದಾನ ನಡೆದಿತ್ತು. ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು.
ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು