9:06 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಮೋದಿ ಸ್ವಚ್ಛ-ಶುದ್ಧ ಆಡಳಿತದಿಂದ ಬಿಜೆಪಿ ಕಂಮ್ ಬ್ಯಾಕ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಫುಲ್ ಖುಷಿ

08/02/2025, 22:31

ಹುಬ್ಬಳ್ಳಿ(reporterkarnataka.com): ಹಾದಿ-ಬೀದಿ ರಂಪ ಮಾಡುತ್ತ ನಕಾರಾತ್ಮಕ ರಾಜಕಾರಣ ಮಾಡುತ್ತಿದ್ದವರನ್ನು ದೆಹಲಿ ಮತದಾರರು ಸಂಪೂರ್ಣ ತಿರಸ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ದೆಹಲಿ ವಿಧಾನಸಭೆ ಚುನಾವಣೆ ಕುರಿತು ವಿಶ್ಲೇಷಿಸಿದರು.
ಜನವಿರೋಧಿ, ಅಭಿವೃದ್ಧಿ ವಿರೋಧಿ, ಢೋಂಗಿ ಭ್ರಷ್ಟಾಚಾರ ವಿರೋಧಿಗಳಿಗೆ ದೆಹಲಿ ಜನ ಮನೆಯ ಹಾದಿ ತೋರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ, ಶುದ್ಧ ಆಡಳಿತ ಮತ್ತು ನೈಜ ಪ್ರಜಾಪ್ರಭುತ್ವವನ್ನು ಬೆಂಬಲಿಸಿದ್ದಾರೆ ಎಂದರು.
*ಬಿಜೆಪಿ ಕಂಮ್ ಬ್ಯಾಕ್:* ದೆಹಲಿಯಲ್ಲಿ 27 ವರ್ಷಗಳ ಬಳಿಕ ಐತಿಹಾಸಿಕ, ಅಭೂತಪೂರ್ವ ಗೆಲುವು ಸಾಧಿಸಿ ಪ್ರಚಂಡ ಬಹುಮತದೊಂದಿಗೆ ಆಡಳಿತಕ್ಕೆ ಕಮ್ ಬ್ಯಾಕ್ ಆಗುತ್ತಿದ್ದೇವೆ ಎಂದು ಸಂತಸ ಹಂಚಿಕೊಂಡರು.
ಆಮ್ ಆದ್ಮಿ ಪಾರ್ಟಿ ನಾಯಕ ಅರವಿಂದ ಕೇಜ್ರಿವಾಲ್ ಅವರ ದುರಹಂಕಾರದ ಮನಸ್ಥಿತಿ ಮತ್ತು ರಾಜಕೀಯ ವಿಭಜಕದಲ್ಲಿ ತೊಡಗಿದ್ದವರನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದರು.
ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಆಂದೋಲನದ ಮೂಲಕ ಅಧಿಕಾರಕ್ಕೆ ಬಂದ ಕೇಜ್ರಿವಾಲ್ ಕೊನೆಗೆ ತಾವೇ ಹಜಾರೆ ವಿರೋಧಿ ಚಳವಳಿ ಹುಟ್ಟು ಹಾಕಿದರು. ತಾವೇ ಭ್ರಷ್ಟಾಚಾರಿಯಾಗಿ ಜೈಲು ಸೇರಿದರು. ಈಗದರ ಫಲ ಅನುಭವಿಸಿದ್ದಾರೆ ಎಂದು ಜೋಶಿ ಹೇಳಿದರು.
*ನಕಾರಾತ್ಮಕ ರಾಜಕಾರಣಕ್ಕೆ ತಕ್ಕ ಉತ್ತರ:* ದೆಹಲಿಯ ಜನ ಈ ನಕಾರಾತ್ಮಕ ರಾಜಕಾರಣಕ್ಕೆ ಪ್ರತ್ಯುತ್ತರ ಕೊಟ್ಟಿದ್ದಾರೆ. AAP, ಕಾಂಗ್ರೆಸ್ ಗೆ ಸರಿಯಾದ ದಾರಿ ತೋರಿಸಿದ್ದಾರೆ. ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದವರಿಗೆ, ಅರಾಜಕತೆ ಸೃಷ್ಟಿಸಿದವರಿಗೆ ಬುದ್ಧಿ ಕಲಿಸಿದ್ದಾರೆ ಎಂದು ಹೇಳಿದರು.
*ರಾಹುಲ್ ಸಾರಥ್ಯದಲ್ಲಿ ನಶಿಸಿದ ಕಾಂಗ್ರೆಸ್:* ಕಾಂಗ್ರೆಸ್ ನಶಿಸಿ ಹೋಗಿದೆ. ದೆಹಲಿಯಲ್ಲಿ ಶೂನ್ಯ ಸಂಪಾದನೆ ಮೂಲಕ ರಾಹುಲ್ ಗಾಂಧಿ ನೇತೃತ್ವವನ್ನು ಸಂಪೂರ್ಣ ತಿರಸ್ಕರಿಸಿದೆ. ಜಾರ್ಖಂಡ್, ಮಧ್ಯಪ್ರದೇಶ, ಜಮ್ಮುಕಾಶ್ಮೀರ, ಗುಜರಾತ್, ದೆಹಲಿ ಹೀಗೆ ಎಲ್ಲಿಯೂ ಕಾಂಗ್ರೆಸ್ ಕಾಣಸಿಗದಾಗಿದೆ. ದೇಶದಲ್ಲಿ ಅಷ್ಟೊಂದು ದಯನೀಯ ಸ್ಥಿತಿಗೆ ತಲುಪಿದೆ ಎಂದು ಹೇಳಿದರು.
ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಬಾರದು. ಒಂದೇ ಒಂದು ಸ್ಥಾನವನ್ನೂ ಗೆಲ್ಲಲಾಗದ ಸ್ಥಿತಿ ಒಳ್ಳೆಯದಲ್ಲ. ಕಾಂಗ್ರೆಸ್ ಇನ್ನಾದರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು