ಇತ್ತೀಚಿನ ಸುದ್ದಿ
ಫೆಬ್ರವರಿ 27ರಿಂದ ಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ
11/02/2025, 10:30
![](https://reporterkarnataka.com/wp-content/uploads/2025/02/IMG-20250211-WA0001.jpg)
ಮಂಗಳೂರು (reporterkarnataka.com): ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ಖರೀದಿಸಲು ಮತ್ತು ವೀಕ್ಷಿಸಲು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ” ಏರ್ಪಡಿಸಲಾಗಿದೆ.
ಪುಸ್ತಕ ಮೇಳದಲ್ಲಿ, ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ ರೂ. 1000 ಭದ್ರತಾ ಠೇವಣಿ ಡಿ.ಡಿ.ಯನ್ನು ಬೆಂಗಳೂರು, ವಿಧಾನಸೌಧ, ಕರ್ನಾಟಕ ವಿಧಾನ ಸಭೆ ಸಚಿವಾಲಯ ಕಾರ್ಯದರ್ಶಿಗಳ ಹೆಸರಿನಲ್ಲ್ಲಿ ಸಲ್ಲಿಸಬೇಕು.
ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನಸಭಾ ಸಚಿವಾಲಯ, ವಿಧಾನ ಸೌಧ, ಬೆಂಗಳೂರು ಅಥವಾ ಸಚಿವಾಲಯದ ವೆಬ್‍ಸೈಟ್: ತಿತಿತಿ.ಞಟಚಿ.ಞಚಿಡಿ.ಟಿiಛಿ.iಟಿ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಫೆ.12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ನಿರ್ಮಿಸಲಾಗುವ 75 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ವಿಧಾನ ಸಭೆ ಸಚಿವಾಲಯದ ಮುಖ್ಯ ಗ್ರಂಥಪಾಲಕರನ್ನು (ದೂ:080-22381350) ಸಂಪರ್ಕಿಸಬಹುದು ಎಂದು ಸಚಿವಾಲಯದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.