ಇತ್ತೀಚಿನ ಸುದ್ದಿ
ಜಾಗತಿಕ ಹೂಡಿಕೆದಾರರ ಸಮಾವೇಶ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ – ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
11/02/2025, 19:24
![](https://reporterkarnataka.com/wp-content/uploads/2025/02/IMG-20250211-WA0029-1024x682.jpg)
ಬೆಂಗಳೂರು(reporterkarnataka.com): ಅರಮನೆ ಮೈದಾನದಲ್ಲಿ ಆಯೋಜಿಸಿರುವ ಜಾಗತಿಕ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025” ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ ಚರ್ಚಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿ ರಾಜ್ಯ ಸಂಪುಟ ಸಹದ್ಯೋಗಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಮಾವೇಶ ಉದ್ಘಾಟನೆಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಕಾರ್ಯಕ್ರಮದಲ್ಲಿ ಜಾಗತಿಕ ಉದ್ಯಮಿಗಳು ಮತ್ತು ಜಾಗತಿಕ ಉದ್ಯಮ ಕ್ಷೇತ್ರವನ್ನು ಉದ್ದೇಶಿಸಿ ಮಾತನಾಡಿದರು.