6:51 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

Literatur | ಶಿಕ್ಷಕಿ ಸುಧಾ ನಾಗೇಶರಿಗೆ ಸಾಧನಾ ಶ್ರೀ ಪ್ರಶಸ್ತಿ: ಫೆ. 14ರಂದು ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ಪ್ರದಾನ

12/02/2025, 13:53

ಬಂಟ್ವಾಳ(reporterkarnata.com): ಶ್ರೀನಿವಾಸ ಯುನಿವರ್ಸಿಟಿ ಮತ್ತು ಶ್ರೀನಿವಾಸ ಸಂಸ್ಥೆ ಮಂಗಳೂರಿನವರು ಎ. ಶ್ಯಾಮರಾವ್ ಸ್ಮರಣಾರ್ಥ ನೀಡುವ ಅತ್ಯುತ್ತಮ ಶಿಕ್ಷರಿಗೆ ನೀಡುವ‌ ಸಾಧನಾ ಶ್ರೀ -2025 ಪ್ರಶಸ್ತಿಗೆ ಪಾಣೆಮಂಗಳೂರು ಪ್ರೌಢಶಾಲೆಯ ಶಿಕ್ಷಕಿ ಸುಧಾ ನಾಗೇಶ್ ಆಯ್ಕೆಯಾಗಿದ್ದಾರೆ.

ಕಳೆದ 35 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಸಾಹಿತಿಯಾಗಿಯೂ ಗುರುತಿಸಲ್ಪಟ್ಟಿದ್ದಾರೆ.
ಮೂಡಲ ಮನೆ, ಹೃದಯರಾಗ, ಹೀಗೆ ಸುಮ್ಮನೆ, ಹನಿ, ಮಿನಿ‌ ಎನ್ ಸೈಕ್ಲೋಪೀಡಿಯ ಫಾರ್ ಸ್ಟೂಡೆಸ್,ಜೀನಿಯಸ್ ಮೊದಲಾದ ಎಂಟು ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ.
ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆಯಾಗಿರುವ ಇವರು ನೂರಾರು‌ ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದು ದುಬೈಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ. ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯೆಯಾಗಿದ್ದು ,”ಬೇಸಿಗೆಯ ತಾಪಕ್ಕೆ ಬಿಸಿಯೇರುತ್ತಿದೆ ಭೂಮಿ ” ಲೇಖನವು ಕೇರಳ ರಾಜ್ಯದ 6ನೇ ತರಗತಿಯ ಪಠ್ಯಪುಸ್ತಕವಾಗಿದೆ.
ಫೆ.14ರಂದು ಶ್ರೀನಿವಾಸ ಕಾಲೇಜು ಮುಕ್ಕದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು