3:08 PM Thursday13 - February 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್… Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ… ಕಾಂಗ್ರೆಸ್‌ ಸರಕಾರ ಪ್ರಕರಣ ವಾಪಸ್‌ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ:… ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್,… ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ… ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.…

ಇತ್ತೀಚಿನ ಸುದ್ದಿ

ಪಿಲಾರ್ ನಲ್ಲಿ ಫೆ.16ರಂದು ತುಳು ಪರ್ಬ: ಜಾನಪದ ಸಿರಿ ಪರಿಚಯ, ಗ್ರಾಮೀಣ ಆಟಕೂಟ

12/02/2025, 19:32

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉಳ್ಳಾಲ ತಾಲೂಕಿನ ಪಿಲಾರ್ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಪಿಲಾರ್ ನ ಪಂಜಂದಾಯ ಸೇವಾ ಸನ್ನಿಧಿಯ ಮೈದಾನದಲ್ಲಿ ಫೆ.16ರಂದು ಬೆಳಿಗ್ಗೆ ‘ತುಳು ಪರ್ಬ’ ಆಯೋಜಿಸಲಾಗಿದೆ.
ಪಿಲಾರ್ ಯುವಕ ಮಂಡಲದ ಸ್ವರ್ಣ ಮಹೋತ್ಸವದ ಪ್ರಯುಕ್ತ ನಡೆಯುವ ಈ ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ 9.00 ಗಂಟೆಗೆ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಕೆ. ಅವರು ಉದ್ಘಾಟಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು .
ಹಿರಿಯ ಪಾರ್ದನಗಾರ್ತಿ ಕುತ್ತಾರ್ ತಿಮ್ಮಕ್ಕ ಅವರು ಪಾಡ್ದನ ಪರಿಚಯ ಮಾಡಿಕೊಡುವರು. ಡೋಲು ವಾದಕ ರಮೇಶ್ ಮಂಚಕಲ್ ಅವರು ತುಳುನಾಡಿನ ಸಾಂಪ್ರದಾಯಿಕ ಡೋಲಿನ ಬಗ್ಗೆ ಹಾಗೂ ದುಡಿ ವಾದಕ ಶೀನಾ ಧರ್ಮಸ್ಥಳ ಅವರು ಸಾಂಪ್ರದಾಯಿಕ ದುಡಿ ವಾದನದ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಪರಿಚಯ ಮಾಡಿಕೊಡುವರು. ಇದೇ ವೇಳೆ ಹಿರಿಯರಿಂದ ಜನಪದ ಕತೆಗಳ ದಾಖಲೀಕರಣ ನಡೆಯಲಿದೆ.
ಜಾನಪದ ಸಿರಿ ವಿಚಾರ ವಿನಿಮಯದ ಬಳಿಕ ಸ್ಥಳೀಯರಿಗಾಗಿ ಗ್ರಾಮೀಣ ಆಟೋಟಗಳು ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸೋಮೇಶ್ವರ ಪುರಸಭಾ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಪುರಸಭಾ ಸದಸ್ಯ ಪುರುಷೋತ್ತಮ ಶೆಟ್ಟಿ ಪಿಲಾರ್, ಚೆಂಬುಗುಡ್ಡೆ ಜುಮ್ಮಾ ಮಸೀದಿಯ ಅಧ್ಯಕ್ಷ ಇಮ್ತಿಯಾಜ್ ಪಿಲಾರ್, ನಿವೃತ್ತ ಆಹಾರ ನಿರೀಕ್ಷಕ ಚಂದ್ರಶೇಖರ ಗಟ್ಟಿ ಮಜಲ್, ಉದ್ಯಮಿ ಚಂದ್ರಹಾಸ ಅವರು ಭಾಗವಹಿಸುವರು.‌ ಪಿಲಾರ್ ಯುವಕ ಮಂಡಲದ ಅಧ್ಯಕ್ಷ ಯಶವಂತ ಶೆಟ್ಟಿ, ಗೌರವಾಧ್ಯಕ್ಷ ಗಜಾನಂದ ಗಟ್ಟಿ, ಪ್ರ.ಕಾರ್ಯದರ್ಶೀ ಧನರಾಜ್ ಉಪಸ್ಥಿತರಿರುವರು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು