ಇತ್ತೀಚಿನ ಸುದ್ದಿ
Suicide | ಮೂಡಿಗೆರೆ: ನೇಣು ಬಿಗಿದುಕೊಂಡು ಸರ್ವೇ ಅಧಿಕಾರಿ ಆತ್ಮಹತ್ಯೆ; ತನಿಖೆ ಆರಂಭ
13/02/2025, 18:23
![](https://reporterkarnataka.com/wp-content/uploads/2025/02/IMG-20250213-WA0008.jpg)
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ
ಸರ್ವೇ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಕುಮಾರ್(45) ಮೃತಪಟ್ಟ ದುರ್ದೈವಿ.
ಬಾಡಿಗೆ ಮನೆಯಲ್ಲಿ ಶಿವಕುಮಾರ್ ಅವರು ನೇಣಿಗೆ ಶರಣಾಗಿದ್ದಾರೆ. ಶ್ರೀನಿವಾಸ್ ಅವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು.
ಹತ್ತಾರು ವರ್ಷಗಳಿಂದ ಬಳಸುತ್ತಿದ್ದ ಸಿಮ್ ಕಾರ್ಡ್ ಅವರು ಚೇಂಜ್ ಮಾಡಿದ್ದರು.
ನಿನ್ನೆಯಷ್ಟೇ ಹೊಸ ಸಿಮ್ ಖರೀದಿ ಮಾಡಿದ್ದರು.
ಸರ್ವೇ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮನೆ ಬಳಿ ಯಾರನ್ನೂ ಬಿಡದೆ
ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಶಿವಕುಮಾರ್ ಆತ್ಮಹತ್ಯೆ ಕುರಿತು ಮೂಡಿಗೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.